ಮಡಿಕೇರಿ ಅ.12 : ಉತ್ತರ ಪ್ರದೇಶ ರಾಜ್ಯದಿಂದ ಪಂಚಾಯತ್ ರಾಜ್ ಸಂಸ್ಥೆಗಳ ಸುಮಾರು 30 ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ತಂಡ ಕರ್ನಾಟಕ ರಾಜ್ಯಕ್ಕೆ ಅಧ್ಯಯನ ಪ್ರವಾಸವನ್ನು ಕೈಗೊಂಡಿದ್ದಾರೆ.
ಕರ್ನಾಟಕದಲ್ಲಿನ ಪಂಚಾಯತ್ ರಾಜ್ ವ್ಯವಸ್ಥೆ, ಪಂಚಾಯತ್ ರಾಜ್ ಸಂಸ್ಥೆಗಳ ಯೋಜನೆ ಮತ್ತು ಮೇಲ್ವಿಚಾರಣೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಯಕ್ರಮ ಮತ್ತು ಯೋಜನೆಗಳ ಅನುಷ್ಠಾನ, ವಿನೂತನ ಚಟುವಟಿಕೆಗಳು ಇತ್ಯಾದಿಗಳ ಬಗ್ಗೆ ತಿಳಿದುಕೊಳ್ಳುವ ಮತ್ತು ಸೂಕ್ತವಾದವುಗಳನ್ನು ಅನುಕರಣೆ ಮಾಡುವ ಉದ್ದೇಶದಿಂದ ಪ್ರವಾಸವನ್ನು ಕೈಗೊಳ್ಳಲಾಗಿದೆ.
ಈ ನಿಟ್ಟಿನಲ್ಲಿ ಪೊನ್ನಂಪೇಟೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸ್ವಂತ ಮೂಲ ಆದಾಯ ನಿರ್ವಹಣೆ ಬಗ್ಗೆ ಸಂವಾದ ಮತ್ತು ಕ್ಷೇತ್ರ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.









