ಮಡಿಕೇರಿ ಅ.12 : ಕೊಡಗು ಜಿಲ್ಲೆಯಲ್ಲಿ ಕಾವೇರಿ ನದಿ ಗಡಿ ಗುರುತು ಸರ್ವೆ ಮಾಡುವ ಮೂಲಕ ನದಿಯ ಸಂರಕ್ಷಣೆ, ನದಿ ತಟಗಳ ಅಭಿವೃದ್ಧಿ ಹಾಗೂ ನದಿ ವ್ಯಾಪ್ತಿಯ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಸರ್ಕಾರದಿಂದ ಯೋಜನೆ ರೂಪಿಸಬೇಕೆಂದು ಕಾವೇರಿ ರಿವರ್ ಸೇವಾ ಟ್ರಸ್ಟ್ ಮನವಿ ಮಾಡಿದೆ.
ಜಿಲ್ಲಾಧಿಕಾರಿ ವೆಂಕಟರಾಜಾ ಹಾಗೂ ಜಿ.ಪಂ ಸಿಇಓ ವರ್ಣಿತ್ ನೇಗಿ ಅವರಿಗೆ ಮನವಿಪತ್ರ ಸಲ್ಲಿಸಿ ಮಾತನಾಡಿದ ಟ್ರಸ್ಟ್ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್ ಜೀವನದಿ ಕಾವೇರಿ ಕೊಡಗು ಜಿಲ್ಲೆಯಲ್ಲಿ ಮೂಲದಿಂದಲೇ ನಿರಂತರವಾಗಿ ಕಲುಷಿತಗೊಳ್ಳುತ್ತಿದ್ದು ಸಂರಕ್ಷಿಸುವ ಅಗತ್ಯವಿದೆ ಎಂದರು.
ನಗರ, ಪಟ್ಟಣ ಮತ್ತು ಗ್ರಾಮಗಳ ತ್ಯಾಜ್ಯ, ಕಲುಷಿತ ನೀರು ನದಿಗೆ ನೇರವಾಗಿ ಸೇರುತ್ತಿದೆ. ನದಿದಂಡೆ ಒತ್ತುವರಿಯಾಗುತ್ತಿದ್ದು, ಅಕ್ರಮವಾಗಿ ಹೊಟೇಲ್, ಅಂಗಡಿ ಮುಂಗಟ್ಟುಗಳು ನಿರ್ಮಾಣವಾಗುತ್ತಿದೆ. ಇಲ್ಲಿಗೆ ಬರುವ ಪ್ರವಾಸಿಗರಿಂದ ಉತ್ಪತ್ತಿಯಾಗುವ ತ್ಯಾಜ್ಯಗಳು ಅವೈಜ್ಞಾನಿಕವಾಗಿ ವಿಲೇವಾರಿಯಾಗಿ ನದಿ ಕಲುಷಿತವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಡಿಕೇರಿ ತಾಲ್ಲೂಕಿನ ತಲಕಾವೇರಿ-ಭಾಗಮಂಡಲದಲ್ಲಿ ಸಮರ್ಪಕ ಕುಡಿಯುವ ನೀರಿನ ಘಟಕ ಸ್ಥಾಪನೆ, ಸಮುದಾಯ ಶೌಚಾಲಯ ಮತ್ತು ಸಮರ್ಪಕ ನಿರ್ವಹಣೆ, ಗ್ರಾ.ಪಂ ಗೆ ಕಸ ವಿಲೇವಾರಿಗೆ ವಾಹನ ಸೌಲಭ್ಯ, ಶಾಶ್ವತ ಪರಿಹಾರಕ್ಕೆ ಒಳಚರಂಡಿ ಯೋಜನೆ ಅನುಷ್ಠಾನ, ನಾಪೋಕ್ಲು ವ್ಯಾಪ್ತಿಯಲ್ಲಿ ನದಿ ತಟದಲ್ಲಿ ತಡೆಗೋಡೆ ನಿರ್ಮಾಣ, ನದಿ ತೀರದಲ್ಲಿರುವ ಒಂದು ಸಾವಿರಕ್ಕೂ ಅಧಿಕ ಮನೆಗಳ ಸ್ಥಳಾಂತರ ಹಾಗೂ ಪುನರ್ವಸತಿ ಕಲ್ಪಿಸುವುದು, ಕಸ ವಿಲೇವಾರಿಗೆ ವಾಹನ ಸೌಲಭ್ಯ, ಕೊಂಡಂಗೇರಿ ಸೇತುವೆ ಬಳಿ ತ್ಯಾಜ್ಯ ಹಾಕುವುದನ್ನು ನಿರ್ಭಂದಿಸಿ ನದಿಯ ರಕ್ಷಣೆ ಮಾಡುವುದು, ನದಿ ಹರಿಯುವ ಮೂರ್ನಾಡು ವ್ಯಾಪ್ತಿಯಲ್ಲಿ ಕಸ ವಿಲೇವಾರಿಗೆ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿದರು.
ವಿರಾಜಪೇಟೆ ತಾಲ್ಲೂಕಿನ ಕಾಕೋಟುಪರಂಬು ಮತ್ತು ಬೇತ್ರಿ ವ್ಯಾಪ್ತಿಯಲ್ಲಿ ನದಿ ನೀರು ಕಲುಷಿತವಾಗುತ್ತಿದೆ. ಹಾಲುಗಂದ, ಕಣ್ಣಂಗಾಲ ಮತ್ತು ಸಿದ್ದಾಪುರ ನದಿ ತಟದಲ್ಲಿ ಇದೇ ಪರಿಸ್ಥಿತಿ ಇದ್ದು, ಮನೆಗಳಿಂದ ನೇರವಾಗಿ ತ್ಯಾಜ್ಯ ನದಿಗೆ ಸೇರುತ್ತಿದೆ. ನದಿ ತಟದಲ್ಲಿರುವ ಮನೆಗಳನ್ನು ಸ್ಥಳಾಂತರಿಸಿ, ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಬೇಕು.
ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು, ಸೂಚನಾ ಫಲಕದ ಮೂಲಕ ಜನರಿಗೆ ಅರಿವು ಮೂಡಿಸಬೇಕು, ಮಾರುಕಟ್ಟೆ ವ್ಯಾಪ್ತಿಯಲ್ಲಿ ಸಮುದಾಯ ಶೌಚಾಲಯ ನಿರ್ಮಾಣ, ನಿರ್ವಹಣೆ, ಮಾಂಸದ ಅಂಗಡಿಗಳಿAದ ಹೊರಸೂಸುವ ತ್ಯಾಜ್ಯಗಳ ಸಮರ್ಪಕ ವಿಲೇವಾರಿ, ಒಳಚರಂಡಿ ಯೋಜನೆಯ ಕ್ರಮಕ್ಕೆ ಆದ್ಯತೆ ನೀಡಬೇಕು. ಮನೆಗಳನ್ನು ತೆರವುಗೊಳಿಸಿ ಪುನರ್ವಸತಿ ಕಲ್ಪಿಸಬೇಕು ಮತ್ತು ನದಿ ತಟವನ್ನು ಅಭಿವೃದ್ಧಿಪಡಿಸಬೇಕೆಂದು ಆಗ್ರಹಿಸಿದರು.
ಕುಶಾಲನಗರ ವ್ಯಾಪ್ತಿಯಲ್ಲಿ ನಂಜರಾಯಪಟ್ಟಣದ ದುಬಾರೆ ಕಾವೇರಿ ನಿಸರ್ಗಧಾಮದಲ್ಲಿ ಮೋಟರ್ ಬೋಟ್‌ಗಳನ್ನು ರದ್ದುಗೊಳಿಸಿ ಪೆಡಲ್ ಬೋಟ್‌ಗಳನ್ನು ಜಿಲ್ಲಾಡಳಿತ ಒದಗಿಸಬೇಕು. ನದಿಗೆ ಇಳಿಯಲು ಮತ್ತು ನಿರ್ಗಮಿಸಲು ಪ್ರತ್ಯೇಕ ಗೇಟ್‌ಗಳನ್ನು ಅಳವಡಿಸಬೇಕು. ರ‍್ಯಾಫ್ಟಿಂಗ್ ಕ್ರೀಡೆ ಬಗ್ಗೆ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುವಂತೆ ಸೂಚಿಸಬೇಕು. ದುಬಾರೆ ಸಾಕಾನೆ ಶಿಬಿರಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ಹೇರಬೇಕು.
ಚಿಕ್ಲಿಹೊಳೆ ಮತ್ತು ಹಾರಂಗಿ ಅಣೆಕಟ್ಟೆ ಬಳಿ ಆನೆಗಳ ಶಿಬಿರ ಪ್ರಾರಂಭಿಲು ಅರಣ್ಯ ಇಲಾಖೆಗೆ ಆದೇಶ ನೀಡಬೇಕು, ಪ್ರವಾಸಿ ಕೇಂದ್ರಗಳಲ್ಲಿ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಪ್ಲಾಸ್ಟಿಕ್ ಬಾಟಲಿಗಳನ್ನು ನಿಷೇಧಿಸಬೇಕು, ಪ್ರವಾಸಿ ಕೇಂದ್ರಗಳಲ್ಲಿ ಕಸದ ಬುಟ್ಟಿ ಅಳವಡಿಸಬೇಕು, ಗ್ರಾಮ ಮತ್ತು ಪ್ರವಾಸಿ ಕೇಂದ್ರಗಳನ್ನು ಖಾಸಗಿ ಸಂಸ್ಥೆಗಳ ಮೂಲಕ ನಿರ್ವಹಣೆ ಮಾಡಬೇಕು.
ಮಳೆಗಾಲದ ಅವಧಿಯಲ್ಲಿ ಕುಶಾಲನಗರ ಪಟ್ಟಣದ ಬಹುತೇಕ ಬಡಾವಣೆಗಳು ಜಲಾವೃತಗೊಳ್ಳುತ್ತಿದ್ದು, ತಜ್ಞರ ಸಮಿತಿ ಮೂಲಕ ಕಾರಣ ಹುಡುಕಬೇಕು. ಬೈಚೇನಹಳ್ಳಿ- ತಾವರೆಕೆರೆ ಬಳಿಯಿಂದ ಕುಶಾಲನಗರದ ಹಳೆ ಮಾರುಕಟ್ಟೆ ವರೆಗೆ ನದಿಗೆ ತಡೆಗೋಡೆ ನಿರ್ಮಿಸುವ ಮೂಲಕ ಪ್ರವಾಹ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ನದಿ ತಟಗಳ ಒತ್ತುವರಿಯನ್ನು ತೆರವುಗೊಳಿಸಿ ಅಭಿವೃದ್ಧಿ ಪಡಿಸುವ ಮೂಲಕ ಪ್ರವಾಸೋದ್ಯಮಕ್ಕೆ ಕ್ರಿಯಾಯೋಜನೆ ರೂಪಿಸಬೇಕು.
ಮೀನು, ಮಾಂಸದAಗಡಿಗಳನ್ನು ನದಿ ತಟದಿಂದ ದೂರ ಇಟ್ಟು ವ್ಯಾಪಾರ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಕೂಡಿಗೆ ಹಾಲಿನ ಡೈರಿಯಿಂದ ನದಿಗೆ ಕುಲುಷಿತ ನೀರು ಹರಿಯದಂತೆ ಎಚ್ಚರವಹಿಸಬೇಕು, ಕುಶಾಲನಗರ ಸಮೀಪದ ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಶುಂಠಿ ತೊಳೆಯುವ ಘಟಕಗಳನ್ನು ತೆರವುಗೊಳಿಸಬೇಕು, ಕುಶಾಲನಗರ ಒಳಚರಂಡಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಚಂದ್ರಮೋಹನ್ ಒತ್ತಾಯಿಸಿದರು.
ಒರಿಸ್ಸಾದ ಶ್ರೀ ಓಂಕಾರನಂದ ಸರಸ್ವತಿ ಸ್ವಾಮೀಜಿ, ಶ್ರೀರಂಗ ಪಟ್ಟಣ ಕಾವೇರಿ ತೀರ್ಥಯಾತ್ರಾ ಸಮಿತಿ ಸ್ಥಾಪಕ ಅಧ್ಯಕ್ಷ ಶ್ರೀ ಗಣೇಶ ಸ್ವರೂಪಾನಂದ ಸ್ವಾಮೀಜಿ, ಕಾವೇರಿ ನದಿ ಸ್ವಚ್ಛತಾ ಆಂದೋಲನದ ಜಿಲ್ಲಾ ಸಂಚಾಲಕರಾದ ರೀನಾ ಪ್ರಕಾಶ್, ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್ ಹಾಗೂ ಕಾವೇರಿ ರಿವರ್ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮಂಡೆಪಂಡ ಬೋಸ್ ಮೊಣ್ಣಪ್ಪ ಮನವಿ ಸಲ್ಲಿಸುವ ಸಂದರ್ಭ ಹಾಜರಿದ್ದರು.
Breaking News
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸ್ವಾತಂತ್ರ್ಯ ಮತ್ತು ಸಂವಿಧಾನಕ್ಕಾಗಿ ಶ್ರಮಿಸಿದ ಮಹನೀಯರನ್ನು ಗೌರವಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಗಣತಂತ್ರ ಹಬ್ಬದ ಮೂಲಕ ನಮ್ಮ ದೇಶದ ಸಾಂವಿಧಾನಿಕ ಅನನ್ಯತೆಯನ್ನು ಸಾರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನದ ಆಶಯಗಳಿಗೆ ಬದ್ಧರಾಗಿರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾವೆಲ್ಲರೂ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ, ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾವೆಲ್ಲರೂ ಭಾರತೀಯರಾಗಿರುವುದಕ್ಕೆ ಹೆಮ್ಮೆ ಪಡೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*