Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ*

ಅಕ್ಟೋಬರ್ 13, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.13 : ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಕಳೆದ ಬಾರಿಯಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ ರಾಜಾ ಅವರು ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ಉಪ ಸಮಿತಿ ರಚಿಸಲಾಗಿದ್ದು, ಅಧಿಕಾರಿಗಳು ತಮ್ಮ ಹಂತದಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸ್ವಾಗತ, ಮೆರವಣಿಗೆ, ಸ್ತಬ್ಧಚಿತ್ರ, ಧ್ಜಜಾರೋಹಣ, ವೇದಿಕೆ, ಪಥಸಂಚಲನ, ಸಾಂಸ್ಕøತಿಕ, ಬಹುಮಾನ ವಿತರಣೆ, ಹೀಗೆ ವಿವಿಧ ಉಪ ಸಮಿತಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ನಗರದ ಕೋಟೆ ಆವರಣದಿಂದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದವರೆಗೆ ಮೆರವಣಿಗೆ ಏರ್ಪಡಿಸುವುದು, ಮೆರವಣಿಗೆ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್, ಕೃಷಿ, ತೋಟಗಾರಿಕೆ, ಪಶುಪಾಲನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ನಗರಸಭೆ ವತಿಯಿಂದ ಸ್ತಬ್ಧಚಿತ್ರವನ್ನು ನಿರ್ಮಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ನಗರದ ಕೋಟೆ ಆವರಣದಿಂದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದವರೆಗೆ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಹಂತದ ಅಧಿಕಾರಿಗಳು, ಪ್ರಾಂಶುಪಾಲರು, ಸಿಬ್ಬಂದಿಗಳು, ಪೊಲೀಸ್, ಎನ್‍ಸಿಸಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಗೃಹ ರಕ್ಷಕ ದಳ ಸೇರಿದಂತೆ ಎಲ್ಲರೂ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ ರಾಜಾ ಅವರು ಕೋರಿದರು.
ವಿದ್ಯಾರ್ಥಿಗಳಿಗೆ ಬೆಳಗ್ಗಿನ ಉಪಾಹಾರ ವ್ಯವಸ್ಥೆ ಮಾಡುವುದು, ಸಾಂಸ್ಕೃತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು. ಎಂಜಿನಿಯರಿಂಗ್ ಇಲಾಖೆಗಳು ವೇದಿಕೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದರು.
‘ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದವರು, ಸಿಇಟಿ, ನೀಟ್ ಹಾಗೂ ಐಐಟಿ ಹೀಗೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸುವಂತಾಗಬೇಕು. ಆ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.’
ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್ ಅವರು ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿ ಮುನೀರ್ ಅಹಮ್ಮದ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಕನ್ನಡ ರಾಜ್ಯೋತ್ಸವ ಸಂಬಂಧ ಹಲವು ಮಾಹಿತಿ ನೀಡಿದರು.
ಐಟಿಡಿಪಿ ಇಲಾಖೆ ಅಧಿಕಾರಿ ಹೊನ್ನೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎನ್.ಮಂಜುನಾಥ್, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ, ಜಿ.ಪಂ.ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜು, ನಿರೂಪಣಾ ಅಧಿಕಾರಿ ನಟರಾಜು, ಹಿರಿಯ ಉಪ ನೋಂದಣಾಧಿಕಾರಿ ಸೌಮ್ಯ ಡೀನಾ, ನಗರಸಭೆಯ ಪರಿಸರ ಎಂಜಿನಿಯರ್ ಸೌಮ್ಯ, ಸಣ್ಣ ನೀರಾವರಿ ಇಲಾಖೆಯ ಎಇಇ ಕುಮಾರಸ್ವಾಮಿ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ದಿವಾಕರ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗೌರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಬಿಂಧು, ಜಿಲ್ಲಾ ಖಜಾನೆ ಇಲಾಖೆಯ ವ್ಯವಸ್ಥಾಪಕರಾದ ಶ್ಯಾಮಸುಂದರ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ, NEWS DESK ಮಾ.7 : ಈ ಸಾಲಿನ ಬಜೆಟ್ ಅಧಿವೇಶನದ ಮೊದಲ ದಿನವೇ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ…

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.