ಮಡಿಕೇರಿ ಅ.13 : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಅ.15, 16 ಮತ್ತು 17 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಅಕ್ಟೋಬರ್, 15 ರಂದು ಬೆಳಗ್ಗೆ 11.30 ಗಂಟೆಗೆ ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದ ತುಲಾ ಸಂಕ್ರಮಣ ಜಾತ್ರೆಯ ಪ್ರಯುಕ್ತ ನಡೆಯುವ (ಕಾವೇರಿ ಉತ್ಸವ) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಂಜೆ 4.30 ಗಂಟೆಗೆ ನಗರದ ಪಂಪಿನಕೆರೆಯಲ್ಲಿ ನಡೆಯುವ ಕರಗ ಉತ್ಸವದಲ್ಲಿ (ಮಡಿಕೇರಿ ದಸರಾ ಉತ್ಸವ ಉದ್ಘಾಟನಾ ಸಮಾರಂಭದಲ್ಲಿ) ಪಾಲ್ಗೊಳ್ಳಲಿದ್ದಾರೆ. ನಂತರ ರಾತ್ರಿ 7.30 ಗಂಟೆಗೆ ಗೋಣಿಕೊಪ್ಪ ದಸರಾ ಉತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಅಕ್ಟೋಬರ್, 16 ರಂದು ಬೆಳಗ್ಗೆ 10.30 ಗಂಟೆಗೆ ಸೋಮವಾರಪೇಟೆಯಲ್ಲಿ ನಡೆಯುವ ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 2.30 ಗಂಟೆಗೆ ಕುಶಾಲನಗರ, ನಂತರ ಸಂಜೆ 4 ಗಂಟೆಗೆ ಕೊಡಗು ವಿಶ್ವವಿದ್ಯಾಲಯಕ್ಕೆ ಭೇಟಿ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಅಕ್ಟೋಬರ್, 17 ರಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲೆಯ ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಗಳ ಪರಿವೀಕ್ಷಣೆ ಮಾಡಲಿದ್ದಾರೆ. ನಂತರ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಳಿಕ ರಾತ್ರಿ 10 ಗಂಟೆಗೆ ಶ್ರೀಭಗಂಡೇಶ್ವರ–ತಲಕಾವೇರಿ ದೇವಾಲಯದ ತುಲಾ ಸಂಕ್ರಮಣ ಜಾತ್ರೆಯ ಪ್ರಯುಕ್ತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ತಿಳಿಸಿದ್ದಾರೆ.









