ಮಡಿಕೇರಿ ಅ.13 : ವಿರಾಜಪೇಟೆ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಷ್ಟೀಯ ಸೇವಾ ಯೋಜನಾ ಘಟಕದ ಸಂಯುಕ್ತಾಶ್ರಯದಲ್ಲಿ ‘ಹಿರಿಯ ನಾಗರೀಕರ ದಿನ ಮತ್ತು ಮಾನಸಿಕ ಆರೋಗ್ಯ ದಿನಾಚರಣೆ’ ಆಚರಿಸಲಾಯಿತು.
ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ವಿರಾಜಪೇಟೆ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ನ್ಯಾಯಮೂರ್ತಿ ಆರ್.ಮಂಜುನಾಥ್ ಉದ್ಘಾಟಿಸಿ, ಮಾತನಾಡಿ, ಹಿರಿಯ ನಾಗರಿಕರನ್ನು ಸಮಾಜದಲ್ಲಿ ಮತ್ತು ಮನೆಯಲ್ಲಿ ಪ್ರೀತಿಯಿಂದ ಗೌರವದಿಂದ ಕಾಣಬೇಕೆಂದು ಕರೆ ನೀಡಿದರು.
ಅಲ್ಲದೇ ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆ ಎಂದು ತಿಳಿಹೇಳಿದರು.
ವಿರಾಜಪೇಟೆಯ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಯತಿರಾಜ್ ಮಾತನಾಡಿ ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯದ ಪ್ರಾಮುಖ್ಯತೆಯ ಬಗ್ಗೆ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ.ದಯಾನಂದ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ಪ್ರಧಾನ ಸಿವಿಲ್ ನ್ಯಾಯಾಧೀಶ ಸಂತೋಷ್ಕೊಟಾರಿ, ಅಪರ ಸಿವಿಲ್ ನ್ಯಾಯಾಧೀಶ ಪ್ರದೀಪ ಪೋತದಾರ್, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ಹೆಚ್.ಎನ್.ವೇಣುಗೋಪಾಲ್ ಬೋಧಕ-ಬೋಧಕೇತರ ವೃಂದದವರು ಮತ್ತು ಸ್ವಯಂ ಸೇವಕ-ಸೇವಕಿಯರು ಹಾಜರಿದ್ದರು.