ಕುಶಾಲನಗರ ಅ.13: ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು(ಕ.ಸಾ.ಪ.) ಹಾಗೂ ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವತಿಯಿಂದ ಅ.17 ರಂದು ದಿವಂಗತ ಎನ್.ಮಹಾಬಲೇಶ್ವರ್ ಭಟ್ ಅವರ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
ಅಂದು ಮಧ್ಯಾಹ್ನ 2.30 ಗಂಟೆಗೆ ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ನಾಗೇಶ್ ಅವರ ಅಧ್ಯಕ್ಷತೆಯಲ್ಲಿ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಕಾಲೇಜಿನ ಪ್ರಾಂಶುಪಾಲ ಡಾ. ಎಸ್.ಎನ್.ಸತೀಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಗೌರವ ಕಾರ್ಯದರ್ಶಿ ಎಸ್.ನಾಗರಾಜ್ ತಿಳಿಸಿದ್ದಾರೆ.
ಜಿಲ್ಲಾ ಅಗ್ರಣಿ ಬ್ಯಾಂಕ್( ಲೀಡ್ ಬ್ಯಾಂಕ್) ನ ನಿವೃತ್ತ ಮುಖ್ಯಸ್ಥ, ವೃತ್ತಿ ಮಾರ್ಗದರ್ಶಕ ಆರ್.ಕೆ.ಬಾಲಚಂದ್ರ “ಕನ್ನಡದ ಏಳು ಬೀಳುಗಳು” ಕುರಿತು ದತ್ತಿ ಉಪನ್ಯಾಸ ನೀಡಲಿದ್ದಾರೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಪಂಚಾಯತ್ ನ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ವಿ.ಪಿ.ಶಶಿಧರ್ ಹಾಗೂ ಬಿಳಿಗೇರಿ ಗ್ರಾಮದ ಕೃಷಿಕ ಎನ್.ಎನ್.ಕುಮಾರ್ ಪಾಲ್ಗೊಳ್ಳಲಿದ್ದಾರೆ.
ಈ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು ಹಾಗೂ ನಾಗರಿಕರು ಭಾಗವಹಿಸುವಂತೆ ಎಸ್.ನಾಗರಾಜ್ ಮನವಿ ಮಾಡಿದರು.











