ಮಡಿಕೇರಿ ಅ.13 : ಕೊಡವ ಮಕ್ಕಡ ಕೂಟ, ಮಂಗಳೂರು ವಿಶ್ವವಿದ್ಯಾನಿಲಯದ ಕೊಡವ ಸಾಂಸ್ಕೃತಿ ಅಧ್ಯಯನ ಪೀಠ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಂಯುಕ್ತಶ್ರಯದಲ್ಲಿ ಅ.16 ರಂದು ಶ್ರೀ ಕಾವೇರಿ ದರ್ಶನಂ ಹಾಗೂ ಕೊಡಗಿನಿಂದ ಗಿರಿಯವರೆಗೆ ಕೃತಿಗಳ ಬಿಡುಗಡೆ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸೆಮಿನಾರ್ ಹಾಲ್ ಸಭಾಂಗಣದಲ್ಲಿ ಪೂರ್ವಹ್ನ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಮಾಜಿ ಸಚಿವ ಮೇರಿಯಂಡ ಸಿ.ನಾಣಯ್ಯ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಐಮುಡಿಯಂಡ ರಾಣಿ ಮಾಚಯ್ಯ, ಶ್ರೀ ಕಾವೇರಿ ದರ್ಶನಂ ಲೇಖಕ, ಕೊಡಗಿನಿಂದ ಗಿರಿಯವರೆಗೆ (ಮೂಲ ಲೇಖಕರು ದಿ.ಮಳವಂಡ ಗೌರಮ್ಮ ಅಚ್ಚಯ್ಯ) ಭಾಷಾಂತರಕಾರ ನಾಗೇಶ್ ಕಾಲೂರು ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ.ರಾಘವ, ಕೊಡವ ಸಾಂಸ್ಕೃತಿಕ ಅಧ್ಯಯನ ಪೀಠದ ಸಂಯೋಜಕರಾದ ಡಾ. ಎಂ.ಎಂ.ಮೀನಾಕ್ಷಿ ಉಪಸ್ಥಿತರಿರಲಿದ್ದಾರೆ.









