ಮಡಿಕೇರಿ ಅ.13 : ಕಂಟೈನರ್ ವಾಹನದಡಿಗೆ ಸಿಲುಕಿ ಬೈಕ್ ಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ರೆಸಾರ್ಟ್ ವೊಂದರ ಬಳಿ ನಡೆದಿದೆ.
ಮೂಲತಃ ಕೆ.ಆರ್. ನಗರದ ಬೇರ್ಯ ಗ್ರಾಮದ ನಿವಾಸಿ ಬೈರವ(28) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಮಡಿಕೇರಿಯಿಂದ ಸುಮಾರು 5 ಕಿ.ಮೀ ದೂರದಲ್ಲಿ ಕಾರೊಂದರ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕೆಳಗೆ ಬಿದ್ದಿದ್ದಾರೆ. ಈ ಸಂದರ್ಭ ಎದುರಿನಿಂದ ಬರುತ್ತಿದ್ದ ಕಂಟೈನರ್ ವಾಹನದ ಚಕ್ರ ಬೈಕ್ ಸವಾರನ ತಲೆ ಮೇಲೆ ಹರಿದು ಈ ಸಾವು ಸಂಭವಿಸಿದೆ.
ಬೈರವ ತಮ್ಮ ಬೈಕ್ ನಲ್ಲಿ ಮಡಿಕೇರಿಯಿಂದ ಕೆ.ಆರ್ ನಗರದ ಕಡೆಗೆ ತೆರಳುತ್ತಿದ್ದಾಗ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಅಪಘಾತದಿಂದ ಸುಮಾರು 1 ಗಂಟೆ ಕಾಲ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.
Breaking News
- *ವಿರಾಜಪೇಟೆಯಲ್ಲಿ ಪರಿಸರ ಜಾಗೃತಿ ಜಾಥಾ : ಸುಂದರ ಕೊಡಗು ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಿ : ಶಾಸಕ ಎ.ಎಸ್.ಪೊನ್ನಣ್ಣ ಕರೆ*
- *ಸುಂಟಿಕೊಪ್ಪ : ವಿವಿಧ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
- *ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ : ಶಾಸಕ ಎ.ಎಸ್.ಪೊನ್ನಣ್ಣ*
- *ಮರಗೋಡು ಕಾರ್ಯಕ್ಷೇತ್ರದಲ್ಲಿ ಕೃಷಿ ಪದ್ಧತಿಯ ಬಗ್ಗೆ ಮಾಹಿತಿ ಕಾರ್ಯಕ್ರಮ*
- *ಕಾಜೂರು ಕರ್ಣ ಕಾಡಾನೆ ಸೆರೆ : ಸ್ಥಳಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ, ಪರಿಶೀಲನೆ*
- *ಚೆನ್ನಯ್ಯನಕೋಟೆ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ : ಗಮನಸೆಳೆದ ವಿದ್ಯಾರ್ಥಿಗಳ ನೃತ್ಯೋತ್ಸವ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*
- *ಕೂಡಿಗೆ ಡಯಟ್ ಗೆ ಹಿರಿಯ ಉಪನ್ಯಾಸಕಿಯಾಗಿ ಮುಂಬಡ್ತಿ ಹೊಂದಿದ ಬಿ.ಎನ್.ಪುಷ್ಪ*
- *ಇತಿಹಾಸ ಪ್ರಸಿದ್ಧ ಪಾಲಿಬೆಟ್ಟ ಉರೂಸ್ ಗೆ ಚಾಲನೆ*
- *ಮೇಕೇರಿ ಪ್ರೀಮಿಯರ್ ಲೀಗ್ ಸೀಸನ್-5 : ಕ್ರೀಡೆಯಿಂದ ದೈಹಿಕ, ಮಾನಸಿಕ ಸಧೃಡತೆ ಸಾಧ್ಯ : ಶಾಸಕ ಎ.ಎಸ್.ಪೊನ್ನಣ್ಣ*
- *ಭಾಗಮಂಡಲ : ಎಲ್ಲಾ ಜಾತಿ, ಧರ್ಮ, ಭಾಷೆಗಳಿರುವ ನಾಡಿನಲ್ಲಿ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಯಾವುದೇ ಕಾರಣಕ್ಕೂ ಧ್ವೇಷ ಮಾಡಬಾರದು : ಸಿಎಂ*