ಮಡಿಕೇರಿ ಅ.14 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ನಗರದ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವ ಅ.15 ರಿಂದ ಮತ್ತು ಸಾಂಸ್ಕೃತಿಕ ಕಲಾವೈಭವ ಅ.16 ರಿಂದ ಆರಂಭಗೊಳ್ಳುತ್ತಿದ್ದು, ನಗರಸಭೆ ಭರದ ಸಿದ್ಧತೆ ನಡೆಸಿದೆ.
ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಅವರ ನೇತೃತ್ವದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು ನಗರ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಂಡರು. ಶಕ್ತಿ ದೇವತೆಗಳ ಕರಗಗಳು ನಗರ ಸಂಚಾರ ಆರಂಭಿಸುವ ಪಂಪಿನ ಕೆರೆ ಭಾಗದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಯಿತು. ಕುರುಚಲು ಗಿಡಗಳನ್ನು ಕಡಿದು, ಕಸವನ್ನು ತೆರವುಗೊಳಿಸಿ ಸುಣ್ಣಬಣ್ಣ ಬಳಿಯಲಾಯಿತು. ಬೀದಿದೀಪಗಳನ್ನು ದುರಸ್ತಿ ಪಡಿಸಲಾಯಿತು, ಚರಂಡಿಗಳ ತ್ಯಾಜ್ಯಗಳನ್ನು ತೆಗೆಯಲಾಯಿತು. ರಸ್ತೆಗಳ ಗುಂಡಿಗಳನ್ನು ಮುಚ್ಚುವ ಕಾರ್ಯ ಭರದಿಂದ ಸಾಗಿತು.
ಹತ್ತು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಗಾಂಧಿ ಮೈದಾನದಲ್ಲಿ ಪ್ರೇಕ್ಷಕರಿಗೆ ಅನುಕೂಲವಾಗುವಂತೆ ಕೆಸರುಮಯವಾಗಿದ್ದ ಮೈದಾನವನ್ನು ಸಮತಟ್ಟುಗೊಳಿಸಲಾಯಿತು. ಇಲ್ಲಿರುವ ಶೌಚಾಲಯಗಳನ್ನು ಸ್ವಚ್ಛಗೊಳಿಸಿ ನೀರಿನ ವ್ಯವಸ್ಥೆ ಕಲ್ಪಿಸಲಾಯಿತು. ಈ ಭಾಗದಲ್ಲೂ ರಸ್ತೆಗಳ ಗುಂಡಿಗಳನ್ನು ಮುಚ್ಚಲಾಯಿತು.
ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿದ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಭಕ್ತರು, ಕಲಾವಿದರು ಹಾಗೂ ಪ್ರೇಕ್ಷಕರಿಗೆ ಎಲ್ಲೂ ಅನಾನುಕೂಲವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಕರಗಗಳು ಮತ್ತು ದಶಮಂಟಪಗಳು ಸಂಚರಿಸುವ ಮಾರ್ಗಗಳನ್ನು ದುರಸ್ತಿ ಪಡಿಸಲಾಗುತ್ತಿದೆ. ಎಲ್ಲಾ ವಾರ್ಡ್ಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತಿದೆ, ಅಲ್ಲದೆ ಬೀದಿದೀಪಗಳನ್ನು ಅಳವಡಿಸಲಾಗುತ್ತಿದೆ. ದಸರಾ ಸಂದರ್ಭ ಸಾರ್ವಜನಿಕರ ಹಿತ ಕಾಯಲು ನಗರಸಭೆ ಬದ್ಧವಾಗಿದೆ. ಸಂಭ್ರಮದ ದಸರಾ ಆಚರಣೆಗೆ ಜನರು ಕೂಡ ನಗರಸಭೆಯೊಂದಿಗೆ ಕೈಜೋಡಿಸಬೇಕು ಮತ್ತು ಸ್ವಚ್ಛತೆಯನ್ನು ಕಾಪಾಡಬೇಕೆಂದು ಮನವಿ ಮಾಡಿದರು.
Breaking News
- *ಭಾಗಮಂಡಲ : ಎಲ್ಲಾ ಜಾತಿ, ಧರ್ಮ, ಭಾಷೆಗಳಿರುವ ನಾಡಿನಲ್ಲಿ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಯಾವುದೇ ಕಾರಣಕ್ಕೂ ಧ್ವೇಷ ಮಾಡಬಾರದು : ಸಿಎಂ*
- *ರೂ.1.50 ಕೋಟಿ ಅನುದಾನ ಬಿಡುಗಡೆಗೆ ಸಿಎಂ ಗೆ ಮನವಿ ಸಲ್ಲಿಸಿದ ಮುದ್ದಂಡ ಹಾಕಿ ಉತ್ಸವ ಸಮಿತಿ*
- *ಅರ್ಚಕರ ಮೇಲೆ ಹಲ್ಲೆ : ಹೋರಾಟದ ಎಚ್ಚರಿಕೆ ನೀಡಿದ ವಿಶ್ವ ಹಿಂದು ಪರಿಷತ್ ಮಠ-ಮಂದಿರ್ ಘಟಕ*
- *ಫೆ.7 ರ ಪಾದಯಾತ್ರೆಗೆ ಸಿಎನ್ಸಿ ಬೆಂಬಲ*
- *ಕೊಡಗು : ಕಾರ್ಮಿಕರ ಸಾಮಾಜಿಕ ಭದ್ರತಾ ಕುರಿತು ಜನಜಾಗೃತಿ : ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ*
- *ಜಿಲ್ಲೆಯ ಸಮಗ್ರ ಮಾಹಿತಿ ಹೊಂದಿರುವ ಅಧಿಕೃತ ವೆಬ್ಸೈಟ್ ಬಿಡುಗಡೆ*
- *ಕೊಡಗಿಗೆ ಸಚಿವ ಸ್ಥಾನ ನೀಡಲು ಒತ್ತಾಯ*
- *ಮರಗೋಡಿನಲ್ಲಿ ಗೌಡ ಕುಟುಂಬಗಳ ಟೆನ್ನಿಸ್ ಬಾಲ್ ಕ್ರಿಕೆಟ್*
- *ತಲಕಾವೇರಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ*
- *ವನ್ಯ ಜೀವಿ -ಮಾನವ ಸಂಘರ್ಷ ತಪ್ಪಿಸಲು ಎಲ್ಲಾ ಕ್ರಮ : ನಿವೇಶನ ಜಮೀನು ಇಲ್ಲದಿರುವವರಿಗೆ ಸರ್ಕಾರಿ ಭೂಮಿ : ಭಾಗಮಂಡಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ*