ಮಡಿಕೇರಿ ಅ.14 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವ ಕರಗೋತ್ಸವದ ಮೂಲಕ ಅ.15 ರಿಂದ ಆರಂಭಗೊಳ್ಳಿದೆ. ಹತ್ತು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅಂತಿಮ ದಿನ ದಶಮಂಟಪಗಳ ಶೋಭಾಯಾತ್ರೆ ನಡೆಯಲಿದ್ದು, ಸಾವಿರಾರು ಜನ ಸಂಭ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅ.17 ರಂದು ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವ ಕೂಡ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ರಾಜ್ಯ ಕ್ಷಿಪ್ರ ಕಾರ್ಯಪಡೆ ತಂಡ ಮಡಿಕೇರಿ ನಗರದಲ್ಲಿ ಪಥ ಸಂಚಲನ ನಡೆಸಿತು.
ತ್ಯಾಗರಾಜ ಕಾಲೋನಿಯಿಂದ ಆರಂಭವಾದ ಪಥ ಸಂಚಲನಕ್ಕೆ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಅವರು ಚಾಲನೆ ನೀಡಿದರು. ಇಂದಿರಾ ಗಾಂಧಿ ವೃತ್ತ, ಪೇಟೆ ಶ್ರೀ ರಾಮ ಮಂದಿರ, ಎಸ್‌ಬಿಐ, ಕೊಹಿನೂರ್ ರಸ್ತೆ, ಹಳೇ ಖಾಸಗಿ ಬಸ್, ಮೇಜರ್ ಮಂಗೇರಿರ ಮುತ್ತಣ್ಣ ವೃತ್ತ ಸೇರಿದಂತೆ ನಗರದ ಮುಖ್ಯ ಬೀದಿಗಳಲ್ಲಿ ಶಸ್ತç ಸಜ್ಜಿತ ರ‍್ಯಾಪಿಡ್ ಆ್ಯಪಿಡ್ ಆ್ಯಕ್ಷನ್ ಫೋರ್ಸ್ ಸಿಬ್ಬಂದಿಗಳು ಪಥ ಸಂಚನ ನಡೆಸಿ, ಹಬ್ಬಾಚರಣೆ ಸಂದರ್ಭ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲ ಎಂಬ ಸಂದೇಶ ರವಾನಿಸಿದರು.
ಜಿಲ್ಲೆಯ ವಿವಿಧ ಸೂಕ್ಷ್ಮ ಪ್ರದೇಶಗಳಲ್ಲೂ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ತಂಡ ಪಥ ಸಂಚಲನ ನಡೆಸಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪಥ ಸಂಚಲನದಲ್ಲಿ ಮಡಿಕೇರಿ ಡಿವೈಎಸ್‌ಪಿ ಎಂ.ಜಗದೀಶ್, ಮಡಿಕೇರಿ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಸೇರಿದಂತೆ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ನ ಸಿಬ್ಬಂದಿಗಳು ಪಾಲ್ಗೊಂಡಿದ್ದರು.