ಮಡಿಕೇರಿ ಅ.14 : ಕರಡಿಗೋಡು ಗ್ರಾಮದ ಕಾಫಿ ತೋಟಗಳಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಕೆಲವು ದಿನಗಳ ಹಿಂದೆಯಷ್ಟೇ ಹೆಜ್ಜೆ ಗುರುತು ಪತ್ತೆಯಾಗಿ ಅರಣ್ಯ ಇಲಾಖೆ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿತ್ತು.
ಇದೀಗ ಮತ್ತೆ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಅರಣ್ಯ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹುಲಿಯ ಚಲನವಲನ ಪತ್ತೆ ಹಚ್ಚಲು ಕ್ಯಾಮೆರಾ ಅಳವಡಿಸಲಾಗಿದೆ.
ಹುಲಿಯನ್ನು ಸೆರೆ ಹಿಡಿಯಲು ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ ರೂಪಿಸಬೇಕಾಗುತ್ತದೆ ಎಂದು ರೈತ ಸಂಘ ಎಚ್ಚರಿಕೆ ನೀಡಿದೆ.











