ಮಡಿಕೇರಿ ಅ.14 : ಮಡಿಕೇರಿ ದಸರಾ ಉತ್ಸವಕ್ಕೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ಕಾರಣ ಕಾನೂನು ಸುವ್ಯವಸ್ಥೆ ಕಾಪಾಡಲು ಜನದಟ್ಟಣೆ ಏರ್ಪಡುವ ಸ್ಥಳಗಳಲ್ಲಿ ಪೊಲೀಸ್ ವ್ಯೂವ್ ಪಾಯಿಂಟ್ ಅಳವಡಿಸುವುದು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಸಿ.ಸಿ. ಕ್ಯಾಮರಾಗಳನ್ನು ಅಳವಡಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಅದರಂತೆ ಪೊಲೀಸ್ ಇಲಾಖೆ ಸೂಚಿಸುವ ಕಡೆಗಳಲ್ಲಿ ಎಲ್ಲಾ ರೀತಿಯ ಭದ್ರತಾ ವ್ಯವಸ್ಥೆಗಳನ್ನು ನಗರಸಭೆ ಕಡೆಯಿಂದ ಮಾಡಲಾಗುತ್ತದೆ ಎಂದು ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಅವರು ತಿಳಿಸಿದ್ದಾರೆ.











