ಮಡಿಕೇರಿ ಅ.14 : ಮುಖವಾಡ ಮತ್ತು ಕರ್ಕಷ ಧ್ವನಿ ಹೊರಡಿಸುವ ಎಲ್ಲಾ ಮಾದರಿಯ ತುತ್ತೂರಿಗಳನ್ನು ಈ ಬಾರಿ ಮಡಿಕೇರಿ ದಸರಾದಲ್ಲಿ ನಿಷೇಧಿಸಲಾಗಿದೆ. ಅದನ್ನು ಬಳಸಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಮುಖವಾಡ ಮತ್ತು ಕರ್ಕಷ ಧ್ವನಿಯ ತುತ್ತೂರಿಗಳನ್ನು ಬಳಸುವವರ ವಿರುದ್ಧ ದಂಡ ವಿಧಿಸಲು ಪೊಲೀಸ್ ಇಲಾಖೆಗೆ ಮನವಿ ಮಾಡಲಾಗಿದೆ. ಮಾತ್ರವಲ್ಲದೇ ಇವುಗಳನ್ನು ಮಾರಾಟ ಮಾಡುವ ಮಳಿಗೆಗಳನ್ನು ತೆರವು ಮಾಡುವಂತೆಯೂ ಪೊಲೀಸರಿಗೆ ತಿಳಿಸಲಾಗಿದೆ ಎಂದು ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷೆ ಅನಿತಾ ಪೂವಯ್ಯ ತಿಳಿಸಿದ್ದಾರೆ.










