ಪುತ್ತೂರು ಅ.16 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಭುವನ್ ರಾಮ್ ಜಗದೀಶ್ ಭಂಡಾರಿ ಇವರು ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದ ಭಾರ ಎತ್ತುವ ಸ್ಪರ್ಧೆಯಲ್ಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
ಮೈಸೂರಿನಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಭುವನ್ ರಾಮ್ 73 ಕೆಜಿ ವಿಭಾಗದಲ್ಲಿ ಈ ಸಾಧನೆಯನ್ನು ಮಾಡಿದ್ದಾರೆ.
ಇವರು ಪುತ್ತೂರಿನ ಜಗದೀಶ್ ಭಂಡಾರಿ ಹಾಗೂ ನಯನಾ ಭಂಡಾರಿ ದಂಪತಿ ಪುತ್ರ.
ಭುವನ್ ರಾಮ್ ಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನದಲ್ಲಿ ಭಾರತೀಯ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನ ವಿಶ್ರಾಂತ ಯೋಧ ಹಾಗೂ ರಾಷ್ಟ್ರೀಯ ವೈಟ್ ಲಿಫ್ಟರ್ ಪುಷ್ಪರಾಜ್ ಭಾರ್ತಿಕುಮೇರು ತರಬೇತಿಯನ್ನು ನೀಡಿದ್ದಾರೆ. ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಅವರು ವಿದ್ಯಾರ್ಥಿಗೆ ಅಭಿನಂದನೆ ಸಲ್ಲಿಸಿದ್ದಾರೆ.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*