ಮಡಿಕೇರಿ ಅ.16 : ಮಡಿಕೇರಿ ದಸರಾ ಉತ್ಸವದ ಅಂಗವಾಗಿ ಕ್ರೀಡಾ ಸಮಿತಿಯಿಂದ ನಗರದ ರಾಜದರ್ಶನ್ ಹೊಟೇಲ್ ಸಭಾಂಗಣದಲ್ಲಿ ಇಂದು ನೂರಾರು ಶಾಲಾ ಮಕ್ಕಳ ಪಾಲ್ಗೊಳ್ಳುವಿಕೆಯೊಂದಿಗೆ ಚೆಸ್ ಪಂದ್ಯಾವಳಿ ಅತ್ಯಂತ ಕುತೂಹಲಕಾರಿಯಾಗಿ ನಡೆಯಿತು.
ಕ್ರೀಡಾ ಸಮಿತಿ ಅಧ್ಯಕ್ಷ ಪ್ರದೀಪ್ ಅವರ ನೇತೃತ್ವದಲ್ಲಿ ನಡೆದ ಚೆಸ್ ಹಾಗೂ ಕೇರಂ ಪಂದ್ಯಾವಳಿಗೆ ಜಿಲ್ಲೆಯ ವಿವಿಧೆಡೆಗಳಿಂದ ನೂರಾರು ವಿದ್ಯಾರ್ಥಿಗಳು ಆಗಮಿಸಿದ್ದು ವಿಶೇಷವಾಗಿತ್ತು.
ಅಚ್ಚುಕಟ್ಟಾದ ವ್ಯವಸ್ಥೆಗಳ ನಡುವೆ ವಿದ್ಯಾರ್ಥಿಗಳು ಚೆಸ್ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರೆ, ಮತ್ತೊಂದೆಡೆ ಕೇರಂ ಪಂದ್ಯಗಳಲ್ಲಿ ಕ್ರೀಡಾ ಸ್ಫೂರ್ತಿ ಮೆರೆದರು.
ದಸರಾ ಕ್ರೀಡಾಕೂಟದ ಅಥ್ಕೆಟಿಕ್ಸ್ ಸ್ಪರ್ಧೆಗಳು ಇದೇ ಅ.18 ರಂದು ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿವೆ.







