ಮಡಿಕೇರಿ ಅ.17 : ನಗರ ದಸರಾ ಸಮಿತಿ, ಬಹುಭಾಷಾ ಕವಿಗೋಷ್ಠಿ ಸಮಿತಿ ವತಿಯಿಂದ ಬಹುಭಾಷಾ ಕವಿಗೋಷ್ಠಿಯು ಅ.18 ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ನಡೆಯಲಿದೆ.
ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ ಸಮಿತಿ ಅಧ್ಯಕ್ಷರಾದ ಉಜ್ವಲ್ ರಂಜಿತ್, ರಾಜ್ಯ ಉಚ್ಚ ನ್ಯಾಯಾಲಯ ಹಾಗೂ ಅಂಕಣಕಾರರು ಹಾಗೂ ಹಿರಿಯ ವಕೀಲರಾದ ಎಚ್.ಎಸ್.ಚಂದ್ರಮೌಳಿ, ಹಿರಿಯ ಕವಿ, ಸಾಹಿತಿ, ಸಂಶೋಧಕರು ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಕೋರನ ಸರಸ್ವತಿ ಪ್ರಕಾಶ್, ಕಾಂತಾರ ಚಲನಚಿತ್ರ ಖ್ಯಾತಿಯ ಸಾಹಿತಿ ಪ್ರಮೋದ್ ಮರವಂತೆ, ಉದ್ಯಮಿ ಹಾಗೂ ಒಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷರಾದ ಗಿರೀಶ್ ಮಲ್ಲಪ್ಪ ಮೋರಿಕಲ್ಲು, ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷರಾದ ಡಾ.ಮೇಚಿರ ಸುಭಾಶ್ ನಾಣಯ್ಯ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೇಶವ ಕಾಮತ್, ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷರಾದ ಅನಿತಾ ಪೂವಯ್ಯ, ಕಾರ್ಯಾಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ, ಖಜಾಂಚಿ ಅರುಣ್ ಶೆಟ್ಟಿ ಇತರರು ಪಾಲ್ಗೊಳ್ಳಲಿದ್ದಾರೆ.
ನಂತರ ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಶಕ್ತಿ ದಿನಪತ್ರಿಕೆ ಪ್ರಧಾನ ಸಂಪಾದಕರಾದ ಜಿ.ರಾಜೇಂದ್ರ ಇತರರು ಪಾಲ್ಗೊಳ್ಳಲಿದ್ದಾರೆ.









