ಮಡಿಕೇರಿ ಅ.17 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಾಗೂ ಸರ್ವೋದಯ ಸಮಿತಿ ಸಹಕಾರದಲ್ಲಿ ಮಹಾತ್ಮ ಗಾಂಧೀಜಿ ಸ್ಮಾರಕ ನಿರ್ಮಾಣಕ್ಕೆ ನಗರದ ಗಾಂಧಿ ಮಂಟಪದಲ್ಲಿ ಭೂಮಿ ಪೂಜೆ ನೆರವೇರಿಸುವ ಮೂಲಕ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಚಾಲನೆ ನೀಡಿದರು.
ಈ ಸಂದರ್ಭ ಶಾಸಕ ಡಾ.ಮಂತರ್ ಗೌಡ, ಮಾಜಿ ಸಚಿವ ಎಂ.ಸಿ.ನಾಣಯ್ಯ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಪ್ರಮುಖರಾದ ಟಿ.ಪಿ.ರಮೇಶ್ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಸರ್ವೋದಯ ಸಮಿತಿ ಸರ್ವ ಸದಸ್ಯರು, ಇತರರು ಪಾಲ್ಗೊಂಡಿದ್ದರು.









