ಮಡಿಕೇರಿ ಅ.17 : ಮರಗೋಡಿನ ಭಾರತಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ 1994-95ನೇ ಸಾಲಿನ ಹತ್ತನೇ ತರಗತಿಯ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.
ಹಳೆಯ ವಿದ್ಯಾರ್ಥಿಗಳು ಸುಮಾರು 28 ವರ್ಷಗಳ ನಂತರ ಮಡಿಕೇರಿಯ ಕಾವೇರಿ ಹಾಲ್ ನಲ್ಲಿ ಒಂದೆಡೆ ಸೇರಿ ಸಂಭ್ರಮಿಸಿದರು. ಕೇಕ್ ಕತ್ತರಿಸುವ ಮೂಲಕ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿ ಜೀವನದ ಸಿಹಿ-ಕಹಿ ನೆನಪುಗಳನ್ನು ಮೆಲುಕು ಹಾಕಿದರು.
ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಹಳೇ ವಿದ್ಯಾರ್ಥಿಗಳು ಹಾಗೂ ಅವರ ಮಕ್ಕಳಿಗೆ ಸಹಾಯಧನ ನೀಡುವ ಕುರಿತು ನಿರ್ಧಾರ ಕೈಗೊಳ್ಳಲಾಯಿತು. ಭಾರತಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ದೃಷ್ಟಿಯಿಂದ ಅಗತ್ಯವಿರುವ ವಸ್ತುಗಳನ್ನು ನೀಡಲು ಮತ್ತು ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಲು ಕ್ರಮಕೈಗೊಳ್ಳುವ ಬಗ್ಗೆ ಚರ್ಚಿಸಿದರು.
ಸಭಾ ಕಾರ್ಯಕ್ರಮದ ನಂತರ ನಡೆದ ಕ್ರೀಡಾಕೂಟದಲ್ಲಿ ಹಳೆಯ ವಿದ್ಯಾರ್ಥಿಗಳು ಹೊಸ ಹುರುಪಿನೊಂದಿಗೆ ಪಾಲ್ಗೊಂಡರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು, ನೆರೆದಿದ್ದವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.
ಅಗಲಿದ ಸ್ನೇಹಿತರಿಗೆ ಮೌನ ಪ್ರಾರ್ಥನೆಯ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸುಮಾರು 42 ಹಳೆಯ ವಿದ್ಯಾರ್ಥಿಗಳು ಪಾಲ್ಗೊಂಡು ಸಮ್ಮಿಲನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಹಳೆಯ ವಿದ್ಯಾರ್ಥಿಗಳಾದ ಗಣೇಶ್ ಡಿ.ಹೆಚ್, ಧರ್ಮೇಂದ್ರ ಕೆ.ವಿ, ಚಂದ್ರಶೇಖರ ರೈ, ಹರಿಣಾಕ್ಷಿ ಕೆ.ಸಿ ಹಾಗೂ ಐ.ಪಿ.ನಾಗೇಶ್ ಅವರುಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.










