ನಾಪೋಕ್ಲು ಅ.17 : ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆಯುತ್ತಿರುವ ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ಶಿಬಿರದ ಅಂಗವಾಗಿ ಸ್ವಚ್ಛತಾ ಶ್ರಮದಾನ ನಡೆಯಿತು.
ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಲಯನ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ನಾಪೋಕ್ಲುವಿನ ಸಮುದಾಯ ಆರೋಗ್ಯ ಕೇಂದ್ರದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಡು ಗಿಡಗಂಟಿಗಳನ್ನು ಕಡಿದು ಪ್ಲಾಸ್ಟಿಕ್ ಕಸಗಳನ್ನು ಹೆಕ್ಕಿ ಸಂಗ್ರಹಿಸಿ ಸ್ವಚ್ಛಗೊಳಿಸಲಾಯಿತು.
ಲಯನ್ಸ್ ಕ್ಲಬ್ ನ ಅಧ್ಯಕ್ಷ ಕನ್ನಂಬೀರ ಸುಧಿ ತಿಮ್ಮಯ್ಯ, ಕಾರ್ಯದರ್ಶಿ ಮಾದೇಯಂಡ ಕುಟ್ಟಪ್ಪ ಸದಸ್ಯರಾದ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ, ಬೊಪ್ಪೇರ ಜಯ ಉತ್ತಪ್ಪ ಹಾಗೂ ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಎಸ್.ಡಿ.ದಮಯಂತಿ ಉಪನ್ಯಾಸಕಿ ಯಾಮಿನಿ ಸಿಬ್ಬಂದಿ ಮಹೇಶ್, ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ










