ನಾಪೋಕ್ಲು ಅ.17 : ಮೂರ್ನಾಡು ಪದವಿ ಕಾಲೇಜಿನ 2023- 24ನೇ ಸಾಲಿನ ಎನ್ ಎಸ್ ಎಸ್ ಘಟಕವನ್ನು ಉದ್ಘಾಟಿಸಲಾಯಿತು.
ಮೂರ್ನಾಡು ವಿದ್ಯಾಸಂಸ್ಥೆಯ ಶಿಕ್ಷಕರು ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಎಸ್.ಡಿ.ಪ್ರಶಾಂತ್ ಮಾತನಾಡಿ, ಎನ್‍ಎಸ್‍ಎಸ್ ಘಟಕ ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣ ಬೆಳೆಸಲು ಸಹಕಾರಿಯಾಗಲಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂರ್ನಾಡು ವಿದ್ಯಾ ಸಂಸ್ಥೆಯ ಅಧ್ಯಕ್ಷ ಬಾಚಿಟ್ಟಿರ.ಜಿ ಮಾದಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಪುದಿಯೋಕ್ಕಡ ಸುಬ್ರಮಣಿ, ಕಾರ್ಯದರ್ಶಿ ಪೆಮ್ಮಡಿಯಂಡ ವೇಣು ಅಪ್ಪಣ್ಣ, ಖಜಾಂಚಿ ಬಡುವಂಡ ಸುಬ್ರಮಣಿ ಹಾಜರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ರೇಖಾ ಚಿಣ್ಣಪ್ಪ ಎನ್ ಎಸ್ ಎಸ್ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕಾಲೇಜಿನ ಉಪನ್ಯಾಸಕಿ ಹಾಗೂ ಎನ್ ಎಸ್ ಎಸ್ ಅಧಿಕಾರಿ ಕಲ್ಪನಾ ಪ್ರಸ್ತಾವಿಕ ನುಡಿಯನ್ನಾಡಿದರು.
2023-24ನೇ ಸಾಲಿನ ಮೊದಲ ಸೆಮಿಸ್ಟರ್ ನ ಕಾಲೇಜಿನ ನ್ಯೂಸ್ ಲೆಟರ್ ಅನ್ನು ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ನಿರ್ದೇಶಕರು, ವಿವಿಧ ವಿಭಾಗದ ಮುಖ್ಯಸ್ಥರು, ಎನ್ಎಸ್ಎಸ್ ವಿದ್ಯಾರ್ಥಿಗಳು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ.









