ಮಡಿಕೇರಿ ಅ.17 : ಕೊಡಗು ಜಿಲ್ಲೆಯ ಕೃಷಿ ಇಲಾಖೆಯ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ ಯೋಜನೆಯಡಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 2 ಹುದ್ದೆಗಳಿಗೆ ಒಪ್ಪಂದದ ಆಧಾರದ ಮೇಲೆ 2023-24ನೇ ಸಾಲಿನ ಸೀಮಿತ ಅವಧಿಗೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಸೋಮವಾರಪೇಟೆ ತಾಲ್ಲೂಕು ಹಾಗೂ ವಿರಾಜಪೇಟೆ ತಾಲ್ಲೂಕುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಷರತ್ತಿಗೆ ಒಳಪಟ್ಟು ಅರ್ಜಿ ಆಹ್ವಾನಿಸಲಾಗಿದೆ.
ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ವಿದ್ಯಾರ್ಹತೆ ಎಂ.ಎಸ್ಸಿ (ಕೃಷಿ/ ತೋಟಗಾರಿಕೆ/ ಮೀನುಗಾರಿಕೆ/ ಅರಣ್ಯ/ ರೇಷ್ಮೆ). ಕನಿಷ್ಠ 2 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಂ.ಎಸ್.ಆಫೀಸ್‍ನಲ್ಲಿ ಪರಿಣಿತಿ ಹೊಂದಿರಬೇಕು. ಗರಿಷ್ಟ ವಯೋಮಿತಿ 45 ವರ್ಷ ಮಾಸಿಕ ರೂ.30 ಸಾವಿರ ಆಗಿದೆ.
ಈ ಹುದ್ದೆಗಳಿಗೆ ಅರ್ಹರಿರುವ ಅಭ್ಯರ್ಥಿಗಳು ನ.7 ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ(ಆತ್ಮ ವಿಭಾಗ) ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ ತಿಳಿಸಿದ್ದಾರೆ.
Breaking News
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*
- *ನ.26ರಂದು ಸಿಎನ್ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*
- *ಹೆಗ್ಗಳ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
- *ಕೂತಿನಾಡು : ದೇವಾಲಯದ ಜೀರ್ಣೋದ್ಧಾರಕ್ಕೆ ಆರೋಡ ತಾಂಬೂಲ ಪ್ರಶ್ನೆ*
- *ಮಡಿಕೇರಿ : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ*
- ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕುರಿತು ಉಪನ್ಯಾಸ : ವಿದ್ಯಾರ್ಥಿಗಳಲ್ಲಿ ಉತ್ತರ ಪ್ರೇರಣೆ, ಸ್ಫೂರ್ತಿ ಬೆಳೆಸಬೇಕು : ಬಸವಕುಮಾರ್ ಪಾಟೀಲ್*
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*