ಮಡಿಕೇರಿ ಅ.17 : ಟೀಕ್ ವುಡ್ ಎಸ್ಟೇಟ್‍ನ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದಸರಾ ಹಬ್ಬದ ಪ್ರಯುಕ್ತ ಅ.15 ರಿಂದ ಅ.23ರ ವರೆಗೆ ನವರಾತ್ರಿ ಉತ್ಸವ ನಡೆಯಲಿದೆ.
ದೇವಾಲಯದಲ್ಲಿ ಒಂಬತ್ತು ದಿನಗಳ ಕಾಲ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿದ್ದು, ಅ.20 ರಂದು ಚಂಡಿಕಾಹೋಮ ನೆರವೇರಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ.








