ನಾಪೋಕ್ಲು ಅ.18 : ತೊಟ್ಟಿಲು ತೂಗುವ ಕೈ ದೇಶವನ್ನು ಆಳುವುದು ಎನ್ನುವ ನಾಣ್ನುಡಿಗೆ ಇಂದು ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಗೆ ಸ್ಥಾನಮಾನ ದೊರೆತ್ತಿರುವುದು ಸಾಕ್ಷಿಯಾಗಿದೆ ಎಂದು ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯ ಹೇಳಿದರು.
ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮುರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯುಕ್ತ ಆಶ್ರಯದಲ್ಲಿ ಮಂಡೇಪಂಡ ಅಕ್ಕಮ್ಮ ಗಣಪತಿ ದತ್ತಿನಿಧಿ ಮತ್ತು ಉಪನ್ಯಾಸ ಕಾರ್ಯಕ್ರಮದಲ್ಲಿ “ಸಾಹಿತ್ಯ ಕ್ಷೇತ್ರದಲ್ಲಿ ಮಹಿಳೆ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ ನಾಪೋಕ್ಲು ಕಸಾಪ ಹೋಬಳಿ ಘಟಕದ ಅಧ್ಯಕ್ಷ ನೆರವಂಡ ಉಮೇಶ್ ಮಾತನಾಡಿ, ಮಹಿಳೆ ತ್ಯಾಗಮಯಿ. ತನ್ನ ಕುಟುಂಬ ನಿರ್ವಹಣೆಯೊಂದಿಗೆ ಸಾಮಾಜಿಕ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವುದು ಪ್ರಶಾಂಸನಾರ್ಹವಿಚಾರ ಎಂದರು.
ವಿದ್ಯಾರ್ಥಿಗಳನ್ನು ಅವರ ಆಸಕ್ತಿಗನುಗುಣವಾಗಿ ಅವರ ಗುರಿ ತಲುಪಿಸಿ ಜೀವನವನ್ನು ರೂಪಿಸುವ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದರು.
ಕರ್ನಾಟಕ ಪಬ್ಲಿಕ್ ಶಾಲೆಯ ಉಪಾಧ್ಯಕ್ಷ ಕೆ.ಎ.ಹಾರಿಸ್ ಮತ್ತು ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಎಸ್.ಡಿ.ದಮಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಹ್ಯಾರೀಸ್, ಕುಟುಂಬ ಹಾಗೂ ಸಮಾಜದಲ್ಲಿ ಮಹಿಳೆಯ ಪಾತ್ರ ಅಗಾಧವಾದುದು. ಮಹಿಳೆ ಸಹನಾಮಯಿ ಬಹುಮುಖ ಪ್ರತಿಭೆ ಎಂದರು.
ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.
ಇದೇ ಸಂದರ್ಭ 2022-23ನೇ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಮಡಿಕೇರಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಕರಿಕೆ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕೆ.ಎಂ.ಮಿನ್ನು ಮೋಳ್ ಇವರಿಗೆ ರಘುರಾಮ ಅಸ್ರಣ್ಣ ಮತ್ತು ಲೀಲಾ ಅಸ್ತ್ರಣ್ಣ ದತ್ತಿ ಪುರಸ್ಕಾರ ನೀಡಿ ಗೌರಸಲಾಯಿತು.
ಶ್ರೀಮತಿ ಗೌರಮ್ಮ ಮಾದಮ್ಮಯ್ಯ ಅವರ ಸಂಪೂರ್ಣ ಮಹಾಭಾರತ ಪ್ರಶ್ನೋತ್ತರ ಪುಸ್ತಕವನ್ನು ಮೂರ್ನಾಡು ಪದವಿ ಪೂರ್ವ ಕಾಲೇಜು ಹಾಗೂ ಕರ್ನಾಟಕ ಪಬ್ಲಿಕ್ ಶಾಲೆಯ ಗ್ರಂಥಾಲಯಕ್ಕೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಮೂರ್ನಾಡು ಎನ್ ಎಸ್ ಎಸ್ ಶಿಬಿರಾರ್ಥಿಗಳಿಂದ ನಾಡಗೀತೆ ಹಾಗೂ ವೈವಿಧ್ಯಮಯ ಮನರಂಜನಾ ಕಾರ್ಯಕ್ರಮಗಳು ನಡೆದವು.
ಈ ಸಂದರ್ಭ ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಉಪನ್ಯಾಸಕರು ಶಿಕ್ಷಕವೃಂದ ಶಿಬಿರಾರ್ಥಿಗಳು ಭಾಗವಹಿಸಿದ್ದರು.
ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಬಾಳೆಯಡ ದಿವ್ಯಾಮಂದಪ್ಪ ಸ್ವಾಗತಿಸಿ, ಗೌರವ ಕೋಶಾಧಿಕಾರಿ ಸಿದ್ದರಾಜು ಬೆಳ್ಳಯ್ಯ ಕಾರ್ಯಕ್ರಮ ನಿರೂಪಿಸಿದರು. ಕರ್ನಾಟಕ ಪಬ್ಲಿಕ್ ಶಾಲೆಯ ಸಹ ಶಿಕ್ಷಕಿ ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಉಷಾರಾಣಿ ವಂದಿಸಿದರು. .
ವರದಿ : ದುಗ್ಗಳ ಸದಾನಂದ