ಮಡಿಕೇರಿ ಅ.18 : ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಪಲ್ಟಿಯಾದ ಪರಿಣಾಮ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಮರಗೋಡು ಚೆಲ್ಲಂಗೋಡು ಸೇತುವೆ ಬಳಿ ನಡೆದಿದೆ.
ಅಸ್ಸಾಂ ಮೂಲದ ಕಾರ್ಮಿಕ ರಜಾಕ್ (55) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಗಾಯಗೊಂಡಿರುವ ನಾಲ್ವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕಟ್ಟಡ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪು ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮಡಿಕೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.










