ಮಡಿಕೇರಿ ಅ.18 : ನಿಷೇಧಿತ ಮಾದಕ ವಸ್ತು MDMA ಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ.
ಕೇರಳ ರಾಜ್ಯದ ಕಾಸರಗೋಡು ಮೂಲದ ಅಮೀರ್.ಟಿ.ಎಂ(28) ಹಾಗೂ ಮಹಮ್ಮದ್ ಶಬೀರ್.ಕೆ (30) ಬಂಧಿತ ಆರೋಪಿಗಳಾಗಿದ್ದಾರೆ. ಇವರ ಬಳಿಯಿಂದ 20 ಗ್ರಾಂ MDMA ಮಾದಕ ವಸ್ತು ಮತ್ತು ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಮಡಿಕೇರಿ ಉಪ ವಿಭಾಗದ ಡಿವೈಎಸ್‌ಪಿ ಜಗದೀಶ್.ಎಂ, ಡಿಸಿಆರ್‌ಬಿ ಪಿಐ ಐ.ಪಿ.ಮೇದಪ್ಪ, ಮಡಿಕೇರಿ ಸಿಪಿಐ ಅನೂಪ್ ಮಾದಪ್ಪ, ನಗರಠಾಣೆ ಪಿಎಸ್‌ಐ ಲೋಕೇಶ್, ಸಿಬ್ಬಂದಿಗಳು ಹಾಗೂ ಡಿಸಿಆರ್‌ಬಿ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು.
ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.










