ನಾಪೋಕ್ಲು ಅ.19 : ನಾಪೋಕ್ಲುವಿನ ಕೊಡಗು ಹಕ್ಕು ಸಂರಕ್ಷಣಾ ಸಮಿತಿ ವತಿಯಿಂದ 27ನೇ ವರ್ಷದ ಪವಿತ್ರ ಕಾವೇರಿ ತೀರ್ಥ ವಿತರಿಸಲಾಯಿತು.
ದಕ್ಷಿಣ ಕಾಶಿ ಎಂದು ಪ್ರಖ್ಯಾತಿ ಪಡೆದಿರುವ ಕೊಡಗಿನ ಕುಲದೇವತೆ ಕಾವೇರಿ ಮಾತೆಯ ಪ್ರತಿಮೆಯ ಭವ್ಯವಾದ ಪುಷ್ಪಾಲಂಕೃತ ರಥದೊಂದಿಗೆ ಪಾಲೂರಿನ ಪಾಲೂರಪ್ಪ ದೇವಾಲಯದಿಂದ ತಲಕಾವೇರಿಗೆ ತೆರಳಿ ಮೆರವಣಿಗೆ ಮೂಲಕ ಸಾಗಿದ ಸಮಿತಿ ಪದಾಧಿಕಾರಿಗಳು ತೀರ್ಥೋದ್ಭವದ ಬಳಿಕ ವಿವಿಧ ಸ್ಥಳಗಳಲ್ಲಿ ತೀರ್ಥ ವಿತರಿಸಿದರು.
ನಂತರ ಪಾಲೂರಿನ ಸತ್ಯ ಹರಿಶ್ಚಂದ್ರ ದೇವಾಲಯದ ಕಾವೇರಿ ನದಿಯಲ್ಲಿ ತಾಯಿ ಕಾವೇರಿ ಮಾತೆಯ ಕಳಶ ವಿಸರ್ಜನೆಯೊಂದಿಗೆ ಸಂಪನ್ನಗೊಂಡಿತ್ತು.
ಈ ಸಂದರ್ಭ ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಸಂಚಾಲಕ ಬಿದ್ದಾಟಂಡ ರೋಜಿ ಚಿಣಪ್ಪ, ಪ್ರಧಾನ ಕಾರ್ಯದರ್ಶಿ ಕಲಿಯಾಟಂಡ ಮಯ್ಯು ದೇವಯ್ಯ, ಪದಾಧಿಕಾರಿಗಳಾದ ಬಿದ್ದಾಟಂಡ ಮಮತಾ ಚಿಣ್ಣಪ್ಪ, ಕಲಿಯಾಟ೦ಡ ಸುಮಿದೇವಯ್ಯ ಮಚ್ಚಂಡ ಶಂಭು ಇನ್ನಿತರರು ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ