ಮಡಿಕೇರಿ ಅ.19 : ಕೊಡವ ಕ್ರಿಕೆಟ್ ಆಟಗಾರರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆ ಕಲ್ಪಿಸುವ ಉದ್ದೇಶದಿಂದ ಕೊಡವ ಕ್ರಿಕೆಟ್ ಅಕಾಡೆಮಿ ವತಿಯಿಂದ ನ.11 ರಿಂದ 14ರ ವರೆಗೆ ವಿರಾಜಪೇಟೆಯಲ್ಲಿ “ಕೊಡವ ಸಮಾಜಗಳ ನಡುವಿನ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ”ಯನ್ನು ಆಯೋಜಿಸಲಾಗಿದೆ ಎಂದು ಅಕಾಡೆಮಿಯ ಖಜಾಂಚಿ ಕೊಕ್ಕೆಂಗಡ ರಂಜನ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನಲ್ಲಿ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಗಳು ಹೆಚ್ಚಾಗಿ ನಡೆಯದ ಕಾರಣ ಬಹಳಷ್ಟು ಲೆದರ್ ಬಾಲ್ ಕ್ರಿಕೆಟ್ ಆಟಗಾರರಿಗೆ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಲು ಅವಕಾಶ ಸಿಗುತ್ತಿಲ್ಲ. ಅಲ್ಲದೆ ರಾಜ್ಯ ತಂಡದಲ್ಲಿ ಸ್ಥಾನ ಪಡೆಯವ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೊಡವ ಕ್ರಿಕೆಟ್ ಅಕಾಡೆಮಿ ಕೊಡವ ಯುವ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ರಾಜ್ಯ ತಂಡಗಳಲ್ಲಿ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೊಡವ ಸಮಾಜಗಳ ನಡುವಿನ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ನಡೆಸಲು ನಿರ್ಧರಿಸಿದೆ ಎಂದು ಹೇಳಿದರು.
ವಿರಾಜಪೇಟೆಯ ಸರ್ಕಾರಿ ಜೂನಿಯರ್ ಕಾಲೇಜಿನ ಮೈದಾನದಲ್ಲಿ ನಾಲ್ಕು ದಿನಗಳ ಕಾಲ ಪಂದ್ಯಾವಳಿ ನಡೆಯಲಿದ್ದು, ಸುಮಾರು 12 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ವಿಜೇತ ತಂಡಗಳಿಗೆ ಆಕರ್ಷಕ ಟ್ರೋಫಿ ಮತ್ತು ನಗದು ಬಹುಮಾವನ್ನು ನೀಡಲಾಗುವುದು.
ಕೊಡಗು ಜಿಲ್ಲೆಯಲ್ಲಿ ಆಧಾರ್ ಕಾರ್ಡ್ ಹೊಂದಿರುವ ಕೊಡವರಿಗೆ ಮಾತ್ರ ಪಂದ್ಯಾವಳಿಯಲ್ಲಿ ಆಡಲು ಅವಕಾಶ ಕಲ್ಪಿಸಲಾಗಿದ್ದು, ಆಸಕ್ತ ತಂಡಗಳು ಇದೇ ಅ.30 ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿ ಹಾಗೂ ತಂಡದ ನೋಂದಾವಣಿಗಾಗಿ 96320 85536, 93438 56877 ಸಂಪರ್ಕಿಸಬಹುದಾಗಿದೆ ಎಂದರು.
::: 23 ವರ್ಷಗಳಿಂದ ಕ್ರಿಕೆಟ್ :::
ಕ್ರಿಕೆಟ್ ಪಂದ್ಯದ ಮೂಲಕ ಕೊಡವ ಜನಾಂಗದಲ್ಲಿ ಒಗ್ಗಟ್ಟನ್ನು ಮೂಡಿಸಲು ಮತ್ತು ಯುವ ಕೊಡವ ಕ್ರಿಕೆಟಿಗರಿಗೆ ಉತ್ತೇಜನ ನೀಡಲು ಕೊಡವ ಕ್ರಿಕೆಟ್ ಅಕಾಡೆಮಿ 1999 ರಲ್ಲ್ಲಿ ಆರಂಭಗೊಂಡಿತು. ಕಳೆದ 23 ವರ್ಷಗಳಿಂದ ಕೊಡವ ಕುಟುಂಬಗಳ ನಡುವಿನ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಕ ಕುಟುಂಬಗಳ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆಸಿಕೊಂಡು ಬರಲಾಗಿದೆ.
ಕೀತಂಡ ಕಾರ್ಸನ್ ಕಾರ್ಯಪ್ಪ ಅವರು ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷರಾಗಿದ್ದು, ಉಪಾಧ್ಯಕ್ಷರಾಗಿ ಚೇರಂಡ ಕಿಶನ್, ಕಾರ್ಯದರ್ಶಿಯಾಗಿ ಕುಂಡ್ರಂಡ ಬೋಪಣ್ಣ ಹಾಗೂ ಖಜಾಂಚಿಯಾಗಿ ಕೊಕ್ಕೆಂಗಡ ರಂಜನ್ ಕಾರ್ಯನಿರ್ವಹಿಸುತ್ತಿದ್ದಾರೆ. ನಿರ್ದೇಶಕರುಗಳಾಗಿ ಪಟ್ಟಡ ಪ್ರಕಾಶ್, ಬಾಳೆಯಡ ಪ್ರತೀಷ್, ಕೀತಿಯಂಡ ವಿವೇಕ್, ತಾತಂಡ ಪ್ರತಾಪ್, ಚೌರಿರ ಶರತ್, ಮಾಚಂಗಡ ಸೋಮಣ್ಣ, ಚೆಕ್ಕೆರ ಚಂದ್ರಪ್ರಕಾಶ್ ಮತ್ತು ಕೊಟ್ಟಂಗಡ ಸೂರಜ್ ಸಹಕಾರ ನೀಡುತ್ತಿದ್ದಾರೆ ಎಂದು ಕೊಕ್ಕೆಂಗಡ ರಂಜನ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅಕಾಡೆಮಿಯ ಕಾರ್ಯದರ್ಶಿ ಕುಂಡ್ರಂಡ ಬೋಪಣ್ಣ, ನಿರ್ದೇಶಕರಾದ ಪಟ್ಟಡ ಪ್ರಕಾಶ್, ಮಾಚಂಗಡ ಸೋಮಣ್ಣ, ಬಾಳೆಯಡ ಪ್ರತೀಷ್ ಹಾಗೂ ಕೊಟ್ಟಂಗಡ ಸೂರಜ್ ಉಪಸ್ಥಿತರಿದ್ದರು.
Breaking News
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*
- *ಅಮ್ಮಾಜಿ ಎಂದೆ ಪ್ರಸಿದ್ದವಾಗಿರುವ ಶ್ರೀ ವೀರನಾಗಮ್ಮ ದೇವಿ*