ಮಡಿಕೇರಿ ಅ.19 : ಅಡುಗೆ ಅನಿಲದ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯೊಂದು ಮಗುಚಿ ಬಿದ್ದ ಘಟನೆ ಮಡಿಕೇರಿ-ಸುಂಟಿಕೊಪ್ಪ ರಾಷ್ಟ್ರೀಯ ಹೆದ್ದಾರಿ ಬೊಯಿಕೇರಿ ಬಳಿ ನಡೆದಿದೆ.
ಇಳಿಜಾರು ರಸ್ತೆಯಲ್ಲಿ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಗುಡ್ಡಕ್ಕೆ ಡಿಕ್ಕಿಯಾಗಿ ಮಗುಚಿಕೊಂಡಿದೆ. ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಸಿಲಿಂಡರ್‍ಗಳು ರಸ್ತೆಯಲ್ಲಿ ಉರುಳಿ ಬಿದ್ದಿದ್ದವು. ಬೇರೊಂದು ಲಾರಿಯಲ್ಲಿ ಸಿಲಿಂಡರ್‍ಗಳನ್ನು ಸಾಗಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಸ್ಥಳಕ್ಕೆ ಮಡಿಕೇರಿ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡರು.









