ಮಡಿಕೇರಿ ಅ.20 : ‘ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6 ರಿಂದ 8 ನೇ ತರಗತಿ) ನೇಮಕಾತಿ-2022”ರ ನೇಮಕಾತಿಗೆ ಸಂಬಂಧಿಸಿದಂತೆ ಉಚ್ಛ ನ್ಯಾಯಾಲಯದ ರಿಟ್ ಪಿಟಿಷನ್ ಅಕ್ಟೋಬರ್ 12, 2023 ರ ವಿಭಾಗೀಯ ಪೀಠದ ತೀರ್ಪಿನಂತೆ ಇದೇ ಮಾ.8 2023 ರಂದು ಪ್ರಕಟಿತ 1:1 ರ ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸೆಲಿಂಗ್‍ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ಅಕ್ಟೋಬರ್, 19 ರಂದು ಶಾಲಾ ಶಿಕ್ಷಣ ಇಲಾಖೆಯ ವೆಬ್‍ಸೈಟ್ https://schooleducation.karnataka.gov.in ನಲ್ಲಿ ಪ್ರಕಟಿಸಲಾಗಿದೆ.
ಈ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಕ್ರಮವಾಗಿ ಗಣಿತ ಮತ್ತು ವಿಜ್ಞಾನ, ಸಮಾಜ ಪಾಠಗಳು, ಜೀವಶಾಸ್ತ್ರ ಹಾಗೂ ಆಂಗ್ಲ ಭಾಷಾ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸಲಿಂಗ್ ಪ್ರಕ್ರಿಯೆಯು ಅಕ್ಟೋಬರ್, 21 ರಂದು ಬೆಳಗ್ಗೆ 10 ಗಂಟೆಯಿಂದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ನಡೆಯಲಿದೆ.
ಆಯ್ಕೆಯಾದ ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್‍ಸೈಟ್‍ನಲ್ಲಿ ಇರುವಂತೆ ಎಲ್ಲಾ ಅಗತ್ಯ ವಿವರಗಳನ್ನು ಪಡೆದುಕೊಂಡು ಸಕಾಲದಲ್ಲಿ ಕೌನ್ಸೆಲಿಂಗ್ ಸ್ಥಳದಲ್ಲಿ ಭಾವಚಿತ್ರವಿರುವ ಗುರುತಿನ ಚೀಟಿಯೊಂದಿಗೆ ಸಂಬಂಧಪಟ್ಟ ಅಗತ್ಯ ದಾಕಲೆಗಳೊಂದಿಗೆ ತಪ್ಪದೇ ಕಡ್ಡಾಯವಾಗಿ ಹಾಜರಾಗುವುದು. ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಮಾತ್ರವೇ ಹಾಜರಾಗಬೇಕು. ಕೌನ್ಸೆಲಿಂಗ್ ಸಮಯದಲ್ಲಿ ಮೋಬೈಲ್ ಪರಿಕರವನ್ನು ಒಳಗೆ ತರುವಂತಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸೌಮ್ಯ ಪೊನ್ನಪ್ಪ ತಿಳಿಸಿದ್ದಾರೆ.
Breaking News
- *ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್ಶಿಪ್ : ಶಶಾಂಕ್ ರಾಜ್ಯಮಟ್ಟಕ್ಕೆ ಆಯ್ಕೆ*
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*
- *ನ.26ರಂದು ಸಿಎನ್ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*
- *ಹೆಗ್ಗಳ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
- *ಕೂತಿನಾಡು : ದೇವಾಲಯದ ಜೀರ್ಣೋದ್ಧಾರಕ್ಕೆ ಆರೋಡ ತಾಂಬೂಲ ಪ್ರಶ್ನೆ*
- *ಮಡಿಕೇರಿ : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ*
- ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕುರಿತು ಉಪನ್ಯಾಸ : ವಿದ್ಯಾರ್ಥಿಗಳಲ್ಲಿ ಉತ್ತರ ಪ್ರೇರಣೆ, ಸ್ಫೂರ್ತಿ ಬೆಳೆಸಬೇಕು : ಬಸವಕುಮಾರ್ ಪಾಟೀಲ್*
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*