ವಿರಾಜಪೇಟೆ ಅ.20 : ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಶ್ರೀ ವನದುರ್ಗಿ ಗುಡಿಯಲ್ಲಿ ನವರಾತ್ರಿ ಪ್ರಯುಕ್ತ ಪಂಚಮಿ ಉತ್ಸವ ಶ್ರದ್ಧಾಭಕ್ತಿಯಿಂದ ಜರಿಗಿತು.
ದೇವಾಲಯದ ಪ್ರಧಾನ ಅರ್ಚಕ ವಿಶ್ವನಾಥ್ ಭಟ್ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು. ಕುಂಕುಮಾರ್ಚನೆ, ದೇವಿ ಅಷ್ಟೋತ್ತರ ಪಠಣ ಹಾಗೂ ಪಾರಾಯಣ ಮಾಡಿ ವಿಶೇಷ ಪೂಜಾ ಸೇವೆಯನ್ನು ಸಲ್ಲಿಸಿದರು.
ಬಳಿಕ ಮಹಾ ಮಂಗಳಾರತಿ ನೆರವೇರಿಸಿ ಪ್ರಾರ್ಥನೆ ಸಲ್ಲಿಸಿದರು. ಭಕ್ತರಿಗೆ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನೆರವೇರಿತು. ವಿನಾಯಕ ಭಜನಾ ಮಂಡಳಿಯಿಂದ ಭಜನೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.









