ಮಡಿಕೇರಿ ಅ.20 : ಐಜಿಪಿ ಸಂದೀಪ್ ಪಾಟೀಲ್ ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿದರು.
ಪೊಲೀಸ್ ಕವಾಯತು ಪರಿವೀಕ್ಷಣೆ ನಡೆಸಿ, ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರಗಳನ್ನು ನೀಡಿದರು.
ಬಳಿಕ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಅಪರಾಧ ಪರಾಮರ್ಶನ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭ ದಕ್ಷಿಣ ವಲಯದ ಡಿಐಜಿಪಿ ಡಾ. ಎಂ.ಬಿ.ಬೋರಲಿಂಗಯ್ಯ, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷ ಕೆ.ಎಸ್.ಸುಂದರ್ ರಾಜ್, ಕೆಎಸ್ಪಿಎಸ್ ಹಾಗೂ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.










