ಮಡಿಕೇರಿ ಅ.21 : ಅಖಿಲ ಕೊಡವ ಸಮಾಜದ ಮಾಜಿ ಅಧ್ಯಕ್ಷ, ವಿರಾಜಪೇಟೆ ಸಮೀಪದ ಕೆದಮಳ್ಳೂರು ಗ್ರಾಮದ ನಿವಾಸಿ ಮಾತoಡ ಮೊಣ್ಣಪ್ಪ( 76) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಕೊಡಗು ಏಕೀಕರಣ ರಂಗ ಸೇರಿದಂತೆ ಹಲವಾರು ಸಂಘ-ಸಂಸ್ಥೆಯಲ್ಲಿ ತೊಡಗಿಸಿಕೊಂಡ ಮಾತoಡ ಮೊಣ್ಣಪ್ಪನವರು, ತಲಕಾವೇರಿ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷರಾಗಿ ತಲಕಾವೇರಿ ಜೀರ್ಣೋದ್ಧಾರಕ್ಕೆ ಕಾರಣಕರ್ತರಾದವರು. ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ ಮೊಣ್ಣಪ್ಪ, ಹಲವಾರು ಸಹಕಾರ ಸಂಘಗಳಲಿ ಕೂಡ ಸೇವೆಯನ್ನು ಸಲ್ಲಿಸಿದ್ದರು. ಸಾಮಾಜಿಕ ಪ್ರಜ್ಞೆ ಹಾಗೂ ಸಾಮಾಜಿಕ ಕಳಕಳಿ ಹೊಂದಿದ್ದ ಇವರ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.
ಮೃತರ ಅಂತ್ಯಕ್ರಿಯೆ ಅ.22 ರಂದು ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.