Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿಯಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ನಮನ ಸಲ್ಲಿಕೆ*
ಇತ್ತೀಚಿನ ಸುದ್ದಿಗಳು

*ಮಡಿಕೇರಿಯಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ನಮನ ಸಲ್ಲಿಕೆ*

October 21, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಅ.21 :  ದೇಶದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಆಸ್ತಿ ರಕ್ಷಣೆ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸರಿಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ಪೊಲೀಸ್ ವರಿಷ್ಠಾಧಿಕಾರಿ ಕೆ.ಸುಂದರರಾಜ್, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಡಿವೈಎಸ್‍ಪಿ ಜಗದೀಶ್, ಪ್ರಮುಖರಾದ ಪಿ.ಎ.ನಂಜಪ್ಪ, ಐ.ಪಿ.ಮೇದಪ್ಪ, ಅನೂಪ್ ಮಾದಪ್ಪ, ಅನಂತ ಎಚ್.ಎಸ್., ಚೆನ್ನನಾಯಕ, ಮಂಜು ಎಚ್.ಡಿ., ವಾಣಿಶ್ರೀ, ಸವಿತಾ, ಲಿಂಗಪ್ಪ, ಶ್ರೀಧರನ್ ನಾಯರ್, ಮುತ್ತಪ್ಪ, ಅಂಬೆಕಲ್ಲು ನವೀನ್, ಸೂರ್ತಲೆ ಸೋಮಣ್ಣ, ಗೀತಾ ಗಿರೀಶ್, ನಿರಂಜನ, ಮಧುಕರ, ಆಂಥೋಣಿ ಡಿಸೋಜ, ಪೂಣಚ್ಚ, ಬಿ.ಬಿ.ಜಗದೀಶ್, ವೆಂಕಪ್ಪ, ಸಿದ್ದೇಶ್, ಸೇರಿದಂತೆ ಹಲವರು ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಹೂಗುಚ್ಛ ಅರ್ಪಿಸಿ, ಗೌರವ ನಮನ ಸಲ್ಲಿಸಿದರು.
ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಕಳೆದ ವರ್ಗ ಕರ್ತವ್ಯ ನಿರ್ವಹಿಸುವಾಗ ದೇಶದಲ್ಲಿ ಪ್ರಾಣ ಕಳೆದುಕೊಂಡ ಪೆÇಲೀಸ್ ಅಧಿಕಾರಿಗಳು ಮತ್ತು ಪೇದೆಗಳ ಹೆಸರು ಓದಿದರು.
ಈ ಸಂದರ್ಭದ ಪೊಲೋಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ನಾಗರಿಕರ ಸಮಗ್ರ ಸುರಕ್ಷತೆ ಹಾಗೂ ಭದ್ರತೆಗಾಗಿ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುವ ಪೊಲೀಸರ ಕರ್ತವ್ಯ ನಿಷ್ಠೆ ಹಾಗೂ ನಿಸ್ವಾರ್ಥ ಸೇವೆಯನ್ನು ಸದಾ ಸ್ಮರಿಸುವಂತಾಗಬೇಕು ಎಂದು ಹೇಳಿದರು.
1959 ರ ಅಕ್ಟೋಬರ್, 21 ರಂದು ಭಾರತದ ಗಡಿ ಪ್ರದೇಶದಲ್ಲಿರುವ ಲಡಾಕ್ ಹಾಟ್ ಸ್ಪ್ರಿಂಗ್ಸ್ ಅಕ್ಷಯ್ ಚಿನ್ ಎಂಬ ಸ್ಥಳದಲ್ಲಿ ಸಿಆರ್‍ಪಿಎಫ್ ಪಡೆಯ ಕರಣ್ ಸಿಂಗ್, ಎಸ್.ಐ ಮತ್ತು ಸಿಬ್ಬಂದಿಗಳು ಗಡಿ ಭದ್ರತಾ ಕರ್ತವ್ಯದಲ್ಲಿರುವಾಗ ಚೀನಾ ಪಡೆ ದಾಳಿ ನಡೆಸಿತು. ನಮ್ಮ ಭಾರತೀಯ ವೀರ ಪೊಲೀಸರು ಎದೆಗುಂದದೆ ಜೀವದ ಹಂಗು ತೊರೆದು ಧೈರ್ಯ ಮತ್ತು ಸಾಹಸದಿಂದ ಹೋರಾಟ ನಡೆಸಿದ್ದು, ಈ ಸಂದರ್ಭದಲ್ಲಿ 10 ಜನ ಪೊಲೀಸರು ವೀರ ಮರಣ ಹೊಂದಿರುತ್ತಾರೆ ಹಾಗೂ 9 ಜನ ಪೊಲೀಸರು ಗಾಯಗೊಂಡು ಸೆರೆಯಾಗಿರುತ್ತಾರೆ ಎಂದು ಮಾಹಿತಿ ನೀಡಿದರು.
ಧೈರ್ಯ ಮತ್ತು ಸಾಹಸದಿಂದ ಹೋರಾಟ ನಡೆಸಿ ವೀರ ಮರಣ ಹೊಂದಿದ ಪೊಲೀಸರ ಸಾವಿಗೆ ಇಡೀ ಭಾರತ ದೇಶದ ಜನತೆಯೇ ಶೋಕಿಸಿತು ಮತ್ತು ಹುತಾತ್ಮರಾದ ಪೊಲೀಸರ ನೆನಪಿಗಾಗಿ ಘಟನೆ ನಡೆದ ಸ್ಥಳದಲ್ಲಿ ಸಮುದ್ರ ಮಟ್ಟದಿಂದ ಸುಮಾರು 16 ಸಾವಿರ ಅಡಿ ಎತ್ತರದ ಒಂದು ಸ್ಮಾರಕವನ್ನು ಭಾರತ ಸರ್ಕಾರ ನಿರ್ಮಿಸಿದೆ ಎಂದರು.
ಕಳೆದ ವರ್ಷ ಭಾರತ ದೇಶದಾದ್ಯಂತ ಒಟ್ಟು 189 ಪೊಲೀಸರು ಸೇವೆಯಲ್ಲಿದ್ದಾಗ ಹುತಾತ್ಮರಾಗಿದ್ದಾರೆ. ಅವರಲ್ಲಿ ಕರ್ನಾಟಕದಿಂದ ರವಿ ಸಿ. ಉಕ್ಕುಂದ್, ಶಬೀರ್ ಹುಸೈನ್, ಸುಭಾಸ್ ಮಡಿವಾಳ್, ಕೆ.ಜೈ ಶ್ರೀನಿವಾಸ್, ನಾಗರಾಜು ಎಂ., ವೆಂಕಟೇಶ್, ಮಯೂರ್ ಚವಾಣ್, ಕಾರೆಪ್ಪ, ಸಿದ್ದೇಶ್ವರ ಎನ್., ಶಿಕಂದರ್ ನಾಟಿಕಾರ್, ಸುರೇಶ್ ಎನ್., ರಮೇಶ್ ಮಲ್ಲಪ್ಪ, ಶರಣಬಸಪ್ಪ, ಮಹೇಶ್, ನಿಂಗಪ್ಪ, ಬಿ.ಎನ್. ಗುದ್ದದ್ ಹುತಾತ್ಮರಾಗಿದ್ದಾರೆ ಎಂದು ಓದಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ ರಾಷ್ಟ್ರದ ಗಡಿ ಪ್ರದೇಶದಲ್ಲಿ ಹೇಗೆ ಸೈನಿಕರು ಕರ್ತವ್ಯ ನಿರ್ವಹಿಸುತ್ತಾರೆ. ಅದೇ ರೀತಿ ರಾಷ್ಟ್ರದ ಆಂತರಿಕ ವ್ಯವಸ್ಥೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ತರವಾಗಿದೆ. ಸದಾ ಎಚ್ಚರವಹಿಸಿ ಸಾರ್ವಜನಿಕರ ರಕ್ಷಣೆ ಮತ್ತು ಸುರಕ್ಷತೆಗೆ ಗಮನಹರಿಸುತ್ತಾರೆ ಎಂದರು.
ದಸರಾ, ಜಾತ್ರೆ, ಉತ್ಸವ ಹೀಗೆ ಹಲವು ಸಂದರ್ಭದಲ್ಲಿ ಪೊಲೀಸರು ರಜೆ ಇಲ್ಲದೆ ಕಾರ್ಯ ನಿರ್ವಹಿಸುತ್ತಾರೆ. ಸುಗಮವಾಗಿ ಕಾರ್ಯಕ್ರಮಗಳು ಜರುಗಲಿ ಎಂದು ಪ್ರಾರ್ಥಿಸಿಕೊಳ್ಳುತ್ತಾರೆ. ಆ ನಿಟ್ಟಿನಲ್ಲಿ ಪೊಲೀಸರ ಜವಾಬ್ದಾರಿ ಹೆಚ್ಚಿನದ್ದಾಗಿದೆ ಎಂದು ವರ್ಣಿತ್ ನೇಗಿ ಹೇಳಿದರು.
ಜಿಲ್ಲಾ ಸಶಸ್ತ್ರ ಪಡೆಯ ಚೆನ್ನನಾಯಕ ನೇತೃತ್ವದಲ್ಲಿ ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯಿಂದ ಮೂರು ಸುತ್ತು ಕುಶಾಲತೋಪು ಹಾರಿಸಿ, ಗೌರವ ಅರ್ಪಿಸಲಾಯಿತು. ಸಿದ್ದೇಶ್ ನೇತೃತ್ವದ ಪೊಲೀಸ್ ವಾದ್ಯ ತಂಡದವರು ರಾಷ್ಟ್ರಗೀತೆ ಹಾಡಿದರು. ಅಂತೋಣಿ ಡಿಸೋಜ ನಿರೂಪಿಸಿ, ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಅ.22 ರಂದು ಮಹಿಳಾ ದಸರಾ : ಮಹಿಳೆಯರಿಗಾಗಿ ವಿವಿಧ ಸ್ಪಧೆ೯ಗಳು*
Next Article *ಸಿದ್ದಾಪುರ : ಭಾರತೀಯ ಮಜ್ದೂರ್ ಸಂಘದಿಂದ ಆಯುಧ ಪೂಜೆ*

Recommended: Website design development company services in Mangalore Forex Trading Teacher in India

Related Posts

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

ಕುಶಾಲನಗರ, NEWS DESK ಫೆ.12:ಸ್ವಚ್ಛ ಕೊಡಗು ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯೊಂದಿಗೆ ಆದ್ಯ ಕರ್ತವ್ಯವಾಗಿದೆ ಎಂದು ಮಡಿಕೇರಿ ಕ್ಷೇತ್ರ ವಿಧಾನಸಭಾ ಶಾಸಕರಾದ…

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.