ಮಡಿಕೇರಿ ಅ.22 : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಕಷ್ಟು ವೈದ್ಯರ ಕೊರತೆ ಇದ್ದರೂ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳದೆ ಇರುವುದನ್ನು ಗಮನಿಸಿದರೆ ಜನರ ಆರೋಗ್ಯದ ಬಗ್ಗೆ ಸರ್ಕಾರಕ್ಕೆ ತಾತ್ಸಾರ ಮನೋಭಾವವಿದೆ ಎನ್ನುವುದು ಸಾಬೀತಾಗುತ್ತದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿದರು.
ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಸಾಕಷ್ಟಿದ್ದರೂ ಕಾಂಗ್ರೆಸ್ ಸರ್ಕಾರ ವಾಸ್ತವ ಪರಿಸ್ಥಿತಿ ಅರಿಯದೆ ಅವಿವೇಕತನದಿಂದ ವರ್ತಿಸುತ್ತಿದೆ. ರಾಜ್ಯದಲ್ಲಿ ವೈದ್ಯರ ಕೊರತೆ ಇಲ್ಲ ಎಂದು ಹೇಳುತ್ತಿರುವುದು ನಿಜಕ್ಕೂ ಶೋಚನೀಯ ಎಂದು ಬೇಸರ ವ್ಯಕ್ತಪಡಿಸಿದರು.
ಇತ್ತೀಚೆಗೆ ನಾನು ಉತ್ತರ ಕರ್ನಾಟಕದ ರಾಜ್ಯ ಪ್ರವಾಸ ಕೈಗೊಂಡಾಗ ಅಲ್ಲಿನ ಜಿಲ್ಲಾ ಆಸ್ಪತ್ರೆಗಳಿಗೆ ಭೇಟಿ ನೀಡಿದ ಸಂದರ್ಭ ಸಾಕಷ್ಟು ವೈದ್ಯರುಗಳಿಲ್ಲದೆ ಮತ್ತು ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಸಾವಿರಾರು ರೋಗಿಗಳು ಪರದಾಡುತ್ತಿರುವ ಅಮಾನವೀಯ ಪರಿಸ್ಥಿತಿಯನ್ನು ಖುದ್ದಾಗಿ ನೋಡಿದ್ದೇನೆ. ಕ್ಯಾಬಿನೆಟ್ ಸಭೆಯ ನಂತರದ ಸರ್ಕಾರದ ಹೇಳಿಕೆ ನೋಡಿ ನಿಜಕ್ಕೂ ಬೇಸರ ತರಿಸುತ್ತಿದೆ.
ರಾಜ್ಯದಲ್ಲಿ 3251 ಎಂಬಿಬಿಎಸ್ ಅಭ್ಯರ್ಥಿಗಳು ಸರ್ಕಾರಿ ಸೇವೆಗೆ ಅರ್ಜಿ ಸಲ್ಲಿಸಿರುವಾಗ ಕೇವಲ 1897 ಹುದ್ದೆಗಳು ಮಾತ್ರ ಖಾಲಿ ಇದೆ ಎಂದು ಸರ್ಕಾರ ಹೇಳಿದೆ. ಸರ್ಕಾರದ ಬೊಕ್ಕಸಕ್ಕೆ ಹೆಚ್ಚಿನ ಹೊರೆಯಾಗುತ್ತದೆ ಎಂಬ ನೆಪವೊಡ್ಡಿ ವೈದ್ಯರುಗಳ ಒಂದು ವರ್ಷದ ಕಡ್ಡಾಯ ಗ್ರಾಮೀಣ ಸೇವೆಯನ್ನು ರದ್ದುಗೊಳಿಸಲು ಸುಗ್ರೀವಾಜ್ಞೆ ಹೊರಡಿಸಿರುವುದು ದುರಂತ. ರಾಜ್ಯದ ಜನತೆಯ ಬಗ್ಗೆ ಸರ್ಕಾರಕ್ಕೆ ಸ್ವಲ್ಪವೂ ಕಾಳಜಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹಿಂದಿನ ವಿಧಾನಸಭೆ ಚುನಾವಣೆ ಸಂದರ್ಭ ಬಿಜೆಪಿ ಸರ್ಕಾರ ದೆಹಲಿಯ ಮೊಹಲ್ಲ ಕ್ಲಿನಿಕ್ ಗಳ ಮಾದರಿಯಲ್ಲಿ ಕರ್ನಾಟಕದಲ್ಲಿ “ನಮ್ಮ ಕ್ಲಿನಿಕ್” ಗಳನ್ನು ಕೇವಲ ಮತ ಸೆಳೆಯುವ ದೃಷ್ಟಿಯಿಂದ ಆತುರಾತುರವಾಗಿ ಸ್ಥಾಪಿಸಿದರು. ಈಗ ರಾಜ್ಯದ ಎಲ್ಲಾ “ನಮ್ಮ ಕ್ಲಿನಿಕ್” ಗಳಲ್ಲಿ ವೈದ್ಯರುಗಳೇ ಇಲ್ಲದೆ, ಸೂಕ್ತ ಆರೋಗ್ಯ ಸೇವೆಗಳು ಲಭಿಸದೆ ಸಾರ್ವಜನಿಕರು ಯಾರೂ ಅಲ್ಲಿಗೆ ಹೋಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈಗ ಇರುವ ಕಾಂಗ್ರೆಸ್ ಸರ್ಕಾರ “ನಮ್ಮ ಕ್ಲಿನಿಕ್” ಗಳಿಗೆ ಹೊಸ ವೈದ್ಯರುಗಳನ್ನು ನೇಮಿಸದೆ ನಿರ್ಲಕ್ಷಿಸಿದೆ ಎಂದು ಟೀಕಿಸಿದರು.
ತಕ್ಷಣ ಸರ್ಕಾರ ಎಚ್ಚೆತ್ತುಕೊಂಡು ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಜಿಲ್ಲಾಸ್ಪತ್ರೆಗಳು ಹಾಗೂ “ನಮ್ಮ ಕ್ಲಿನಿಕ್” ಗಳಿಗೆ ವೈದ್ಯರುಗಳನ್ನು ನೇಮಕ ಮಾಡಬೇಕು. ಒಂದು ವರ್ಷದ ಕಡ್ಡಾಯ ಗ್ರಾಮೀಣ ಸೇವೆಯನ್ನು ರದ್ದುಗೊಳಿಸುವ ಸುಗ್ರೀವಾಜ್ಞೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದ್ದಾರೆ.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*