ಮಡಿಕೇರಿ ಅ.22 – ಮಡಿಕೇರಿ ದಸರಾ ಸಾಂಸ್ಕೃತಿಕ ಕಾಯ೯ಕ್ರಮಗಳ 9 ದಿನವಾದ ಮಂಗಳವಾರ ವಿಜಯದಶಮಿ ಸಂದಭ೯ ವೈವಿಧ್ಯಮಯ ಕಾಯ೯ಕ್ರಮಗಳು ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಆಯೋಜಿಸಲ್ಪಟ್ಟಿದೆ.
ಅ.24 ರಂದು ಮಂಗಳವಾರ ವಿಜಯದಶಮಿ ಪ್ರಯುಕ್ತ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಮುದ್ರ ಸ್ಕೂಲ್ ಆಫ್ ಡಾನ್ಸ್ ತಂಡದಿಂದ ನೃತ್ಯ ವೈವಿಧ್ಯ , ಉಡುಪಿಯ ಭಾಗ೯ವಿ ಡಾನ್ಸ್ ಟೀಮ್ ನಿಂದ ಗ್ರಾವಿಟಿ ಡಾನ್ಸ್ , ಚಕ್ಕೇರ ಪಂಚಮ್ ತ್ಯಾಗರಾಜ್ ಮತ್ತು ತಂಡದಿಂದ ಗಾನಸುಧೆ ಸೇರಿದಂತೆ ಅನೇಕ ಕಾಯ೯ಕ್ರಮಗಳನ್ನು ದಸರಾ ಸಾಂಸ್ಕೖತಿಕ ಸಮಿತಿಯಿಂದ ಆಯೋಜಿಸಲಾಗಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗಿನ ಜಾವ 5 ಗಂಟೆಯವರೆಗೆ ರಾಜ್ಯದ ಹೆಸರಾಂತ ಗಾಯಕ, ಗಾಯಕಿಯರಿಂದ ಸಂಗೀತ ರಸಮಂಜರಿ ಕಾಯ೯ಕ್ರಮವನ್ನು ಮಡಿಕೇರಿ ನಗರ ದಸರಾ ಸಮಿತಿಯಿಂದ ಆಯೋಜಿಸಲಾಗಿದೆ.











