ಮಡಿಕೇರಿ ಅ.25 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ 2022-23 ನೇ ಸಾಲಿನ 19 ನೇ ಗೌರಮ್ಮ ದತ್ತಿನಿಧಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಾಗೂ ಗೌರಮ್ಮ ದತ್ತಿನಿಧಿ ಕಥಾಸ್ಪರ್ಧೆ ಬಹುಮಾನ ವಿತರಣೆ ಕಾರ್ಯಕ್ರಮವು ಅಕ್ಟೋಬರ್, 27 ರಂದು ಮಧ್ಯಾಹ್ನ 1.30 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ (ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣ) ನಡೆಯಲಿದೆ.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಪಿ.ಕೆ.ವೆಂಕಟೇಶ್ ಪ್ರಸನ್ನ, ಕೊಡಗು ವಿಶ್ವ ವಿದ್ಯಾನಿಲಯದ ಚಿಕ್ಕಅಳುವಾರ ಜ್ಞಾನಕಾವೇರಿ ಕನ್ನಡ ಉಪನ್ಯಾಸಕರಾದ ಡಾ.ಜಮೀರ್ ಅಹ್ಮದ್, ಪ್ರಶಸ್ತಿ ವಿಜೇತರಾದ ಕಟ್ರತನ ಲಲಿತ ಅಯ್ಯಣ್ಣ, ಈರಮಂಡ ಹರಿಣಿ ವಿಜಯ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್, ನಿಕಟಪೂರ್ವ ಅಧ್ಯಕ್ಷರಾದ ಬಿ.ಎಸ್.ಲೋಕೇಶ್ ಸಾಗರ್, ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್(ಮಡಿಕೇರಿ), ರಾಜೇಶ್ ಪದ್ಮನಾಭ(ವಿರಾಜಪೇಟೆ), ಎಸ್.ಡಿ.ವಿಜೇತ(ಸೋಮವಾರಪೇಟೆ), ಕೆ.ಎಸ್.ನಾಗೇಶ್ (ಕುಶಾಲನಗರ), ಕೊಳೇರ ದಯಾಚಂಗಪ್ಪ(ಪೊನ್ನಂಪೇಟೆ) ಇತರರು ಪಾಲ್ಗೊಳ್ಳಲಿದ್ದಾರೆ.











