ಮಡಿಕೇರಿ ಅ.25 : ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್.ವೈದ್ಯ ಅವರು ಅಕ್ಟೋಬರ್, 26 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಅಕ್ಟೋಬರ್, 26 ರಂದು ಬೆಳಗ್ಗೆ 11 ಗಂಟೆಗೆ ಅಳಿವಿನ ಅಂಚಿನಲ್ಲಿರುವ ಮಹಾಶಿರಾ ತಳಿ ಮೀನಿನ ಮರು ಸಂತಾನೋತ್ಪತಿ ಹಾರಂಗಿಯ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.
ನಂತರ ಮಧ್ಯಾಹ್ನ 1.30 ಗಂಟೆಗೆ ಮಡಿಕೇರಿ ತಾಲ್ಲೂಕಿನ ಕಡಗದಾಳು ಗ್ರಾಮದ ಬಳಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ನಿರ್ಮಾಣವಾಗಿರುವ ಮೀನು ಮಾರಾಟ ಕೇಂದ್ರ ವೀಕ್ಷಣೆ ಮಾಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪಿ.ಸಿ.ರವೀಂದ್ರ ಅವರು ತಿಳಿಸಿದ್ದಾರೆ.










