ಮಡಿಕೇರಿ ಅ.27 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಇವರ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡ ಅವರ ಹುತಾತ್ಮ ದಿನಾಚರಣೆಯ ಪ್ರಯುಕ್ತ ಅ.31 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿರುವ ಗುಡ್ಡಮನೆ ಅಪ್ಪಯ್ಯ ಗೌಡರ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸುವ ಕಾರ್ಯಕ್ರಮ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಮೈಸೂರು ವಿಭಾಗದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಆಡಳಿತಾಧಿಕಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ, ಇತರರು ಪಾಲ್ಗೊಳ್ಳಲಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*