ಮಡಿಕೇರಿ ಅ.27 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭವು ಅ.28 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಶ್ರೀಧರ ಆರ್. ಹೆಗಡೆ, ಇತರರು ಪಾಲ್ಗೊಳ್ಳಲಿದ್ದಾರೆ.
ಸಭಾ ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ 9.45 ಗಂಟೆಗೆ ನಗರದ ಗಾಂಧಿ ಮಂಟಪದ ಬಳಿ ಸರ್ವರೂ ಸಮಾವೇಶಗೊಂಡು ಕಲಾತಂಡ, ವಾದ್ಯ ತಂಡದೊಂದಿಗೆ ವಾಲ್ಮೀಕಿಯವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ.









