ಬೇಕಾಗುವ ಪದಾರ್ಥಗಳು : ಮಶ್ರೂಮ್ – 200 ಗ್ರಾಂ, ಕಬಾಬ್ ಪೌಡರ್ –ಒಂದು ಪ್ಯಾಕೆಟ್, ಶುಂಠಿ– ಬೆಳ್ಳುಳ್ಳಿ ಪೇಸ್ಟ್- 1 ಚಮಚ, ಖಾರದಪುಡಿ –ಅರ್ಧ ಚಮಚ, ಚಿಕನ್ ಮಸಾಲ– ಅರ್ಧ ಚಮಚ, ಮೊಟ್ಟೆ –ಒಂದು, ಉಪ್ಪು- ರುಚಿಗೆ ತಕ್ಕಷ್ಟು, ಎಣ್ಣೆ – ಸ್ವಲ್ಪ
ಮಾಡುವ ವಿಧಾನ : ಮಶ್ರೂಮ್ ಗಳನ್ನು ಚೆನ್ನಾಗಿ ತೊಳೆದುಕೊಳ್ಳಿ. ನಂತರ ಇದಕ್ಕೆ ಕಬಾಬ್ ಪೌಡರ್, ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಖಾರದಪುಡಿ, ಚಿಕನ್ ಮಸಾಲೆ ಪುಡಿ, ಮೊಟ್ಟೆ, ಎಣ್ಣೆ, ರುಚಿಗೆ ತಕ್ಕಷ್ಟು ಉಪ್ಪು ಹಾಗೂ ಸ್ವಲ್ಪ ನೀರು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ.
ಮಸಾಲೆ ಹಿಡಿಯುವವರೆಗೆ ಕೈಯಾಡಿಸಿ. 10 ರಿಂದ 15 ನಿಮಿಷಗಳ ಕಾಲ ನೆನೆಯಲು ಬಿಡಿ.
ನಂತರ ಪಾತ್ರೆಯಲ್ಲಿ ಎಣ್ಣೆ ಹಾಕಿ ಮಧ್ಯಮ ಉರಿಯಲ್ಲಿ ಬಿಸಿ ಮಾಡಿ.
ಅದಕ್ಕೆ ನೆನೆಸಿಟ್ಟಿದ್ದ ಮಶ್ರೂಮ್ ಹಾಕಿ. ಅದು ಕೆಂಪು ಬಣ್ಣಕ್ಕೆ ತಿರುಗುವವರೆಗೂ ಬೇಯಿಸಿ. ಇದೀಗ ಬಿಸಿ ಬಿಸಿಯಾದ ಮಶ್ರೂಮ್ ಕಬಾಬ್ ಸವಿಯಲು ಸಿದ್ಧ.