ಮಡಿಕೇರಿ ಅ.27 : ಉಡುಪಿಯ ಸಾಲಿಗ್ರಾಮ ಡಿವೈನ್ ಪಾರ್ಕ್ ಟ್ರಸ್ಟ್ ನ ಅಂಗ ಸಂಸ್ಥೆಯಾದ ಮೂರ್ನಾಡುವಿನ ವಿವೇಕ ಜಾಗೃತ ಬಳಗದ ವತಿಯಿಂದ ಅ.29 ರಂದು ಓದುಗರ ಸಮಾವೇಶ ನಡೆಯಲಿದೆ.
ಸಿದ್ದಾಪುರದ ಕರಡಿಗೋಡು ಬಸವೇಶ್ವರ ದೇವಾಲಯದ ಸಮುದಾಯ ಭವನದಲ್ಲಿ ಅಪರಾಹ್ನ 2.30 ಗಂಟೆಯಿಂದ ಸಂಜೆ 4.30 ರವರೆಗೆ ನಡೆಯಲಿರುವ ಓದುಗರ ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವ ಉಡುಪಿಯ ಸಾಲಿಗ್ರಾಮ ಡಿವೈನ್ ಪಾರ್ಕ್ ಟ್ರಸ್ಟ್ ನ ಗುರುಪ್ರಸಾದ್ ಅವರು ಉಪನ್ಯಾಸ ನೀಡಲಿದ್ದಾರೆ ಎಂದು ಮೂರ್ನಾಡು ವಿವೇಕ ಜಾಗೃತ ಬಳಗದ ಅಧ್ಯಕ್ಷರಾದ ಬಿ.ಟಿ.ದಿವ್ಯ ತೇಜಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









