ಮಡಿಕೇರಿ ಅ.28 : ಕೇಂದ್ರ ಸರ್ಕಾರ ಸಹಕಾರ ಸಚಿವಾಲಯವನ್ನು ನೂತನವಾಗಿ ಸ್ಥಾಪಿಸಿ ಸಹಕಾರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟು, ಸಹಕಾರ ಕ್ಷೇತ್ರದ ಮೂಲಕ ಪಾರದರ್ಶಕ ಆಡಳಿತ ನೀಡಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವತ್ತ ಸಾಗುತ್ತಿದೆ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಮನು ಮುತ್ತಪ್ಪ ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿ., ಮಡಿಕೇರಿ ಹಾಗೂ ಸಹಕಾರ ಇಲಾಖೆ, ಕೊಡಗು ಜಿಲ್ಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಪ್ಯಾಕ್ಸ್, ಎ.ಪಿ.ಸಿ.ಎಂ.ಎಸ್., ಮತ್ತು ಲ್ಯಾಂಪ್ಸ್ ಸಹಕಾರ ಸಂಘಗಳ ಕಾರ್ಯನಿರ್ವಾಹಕರಿಗೆ ಕೇಂದ್ರ ಸರ್ಕಾರದ ಸಹಕಾರ ಇಲಾಖೆಯ ನೂತನ 13 ಯೋಜನೆಗಳ ಕುರಿತು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ನಡೆದ ಶಿಕ್ಷಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರವು ದೇಶದ ಎಲ್ಲಾ ಸಹಕಾರ ಸಂಘಗಳಿಗೆ ಅನ್ವಯಿಸುವಂತೆ ಏಕರೂಪದ ಉಪನಿಯಮವನ್ನು ಜಾರಿಗೆ ತರಲಾಗುತ್ತಿದ್ದು, ಆ ಮೂಲಕ ಸಂಘವು ಹಲವು ಉದ್ದೇಶಗಳನ್ನು ಹೊಂದಿ ಅವುಗಳನ್ನು ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತಿದೆ. ಸಂಘಗಳು ತಮ್ಮ ದೈನಂದಿನ ಕಾರ್ಯಚಟುವಟಿಕೆಯೊಂದಿಗೆ ಬಹು ಆದಾಯಾಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳುವಂತೆ ಉತ್ತೇಜಿಸುತ್ತಿದೆ. ಈ ದಿಸೆಯಲ್ಲಿ ಸಹಕಾರ ಸಂಘಗಳ ಕಾರ್ಯನಿರ್ವಾಹಕರಿಗೆ ಈ ಕುರಿತು ಸಮಗ್ರ ಮಾಹಿತಿಯ ಅವಶ್ಯಕತೆ ಇರುವುದರಿಂದ ನಾವು ಇಂತಹ ಶಿಕ್ಷಣ ಕಾರ್ಯಕ್ರಮವನ್ನು ಉಪನಿಬಂಧಕರ ಆಸಕ್ತಿ ಮೇರೆಗೆ ನಡೆಸಲಾಗುತ್ತಿದೆ. ಪ್ರತಿಯೊಬ್ಬರು ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು. ಸಂಘಗಳು ಕೇವಲ ಸಾಲ ನೀಡುವಿಕೆ, ವಸೂಲಾತಿಗೆ ಮಾತ್ರ ಸೀಮಿತವಾಗದೆ ಬಹುಚಟುವಟಿಕೆಗಳನ್ನು ಕೈಗೊಂಡಾಗ ಮಾತ್ರ ಸಧೃಡವಾಗಿ ನಿಲ್ಲಲು ಸಾಧ್ಯ ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಅಲ್ಲದೆ ಜಿಲ್ಲೆಯಲ್ಲಿ ಸಹಕಾರ ಸಪ್ತಾಹವನ್ನು ನವೆಂಬರ್ ತಿಂಗಳಿನಲ್ಲಿ ಆಚರಿಸಲಾಗುವುದರಿಂದ ಎಲ್ಲಾ ಸಹಕಾರ ಸಂಘಗಳು ಸಪ್ತಾಹವನ್ನು ಅರ್ಥಪೂರ್ಣವಾಗಿ ಹಾಗೂ ಸುತ್ತೋಲೆ ರೀತ್ಯಾ ಆಚರಿಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಕನ್ನಂಡ ಸಂಪತ್, ಕಲಿಕೆಯು ಅನಂತವಾಗಿದ್ದು, ಶಿಕ್ಷಣ ಕಾರ್ಯಕ್ರಮದಲ್ಲಿ ತಿಳಿಸುವ ಅಂಶಗಳ ಬಗ್ಗೆ ಸಂಘಗಳು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಸಹಕಾರ ಸಂಘಗಳ ಉಪನಿಬಂಧಕರಾದ ಎಂ.ಎಸ್.ಕೃಷ್ಣ ಪ್ರಸಾದ್ ಕೇಂದ್ರ ಸರ್ಕಾರದ ಸಹಕಾರ ಇಲಾಖೆಯ 13 ಯೋಜನೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಎಂ.ಈ. ಮೋಹನ್ ಸಹಕಾರ ಕಾಯ್ದೆ, ಕಾನೂನು ತಿದ್ದುಪಡಿ, ಸಹಕಾರ ಚುನಾವಣೆ ಹಾಗೂ ಆಡಳಿತ ನಿರ್ವಹಣೆ ಕುರಿತು ಮಾಹಿತಿ ನೀಡಿದರು.
ಕೃಷಿ ಇಲಾಖೆಯ ನಾರಾಯಣಗೌಡರವರು ಕಾಮನ್ ಸರ್ವಿಸ್ ಸೆಂಟರ್ ಸ್ಥಾಪಿಸುವ ಕುರಿತು, ಗೊಬ್ಬರದ ಪರವಾನಗಿ ಪಡೆದುಕೊಳ್ಳಲು ಇರುವ ಮಾನದಂಡಗಳ ಬಗ್ಗೆ, ‘ಫ್ರೂಟ್ಸ್’ ತಂತ್ರಾಂಶದ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಯೂನಿಯನ್ ನಿರ್ದೇಶಕರಾದ ಎನ್.ಎ. ರವಿ ಬಸಪ್ಪ, ಪಿ.ಸಿ. ಅಚ್ಚಯ್ಯ, ಕೆ.ಎಸ್. ಗಣಪತಿ, ಕೆ.ಎಂ. ತಮ್ಮಯ್ಯ, ವಿ.ಕೆ. ಅಜಯ್ ಕುಮಾರ್, ಪಿ.ಬಿ. ಯತೀಶ್, ಸಹಕಾರ ಅಭಿವೃದ್ಧಿ ಅಧಿಕಾರಿ ಪಿ.ಬಿ. ಮೋಹನ್, ಬಿ.ಕೆ. ವಿಜಯೇಂದ್ರ ಅಧೀಕ್ಷಕರಾದ ಶ್ರೀಮತಿ ಆಶಾ, ಮಾರಾಟಾಧಿಕಾರಿ ಸಿದ್ದಲಿಂಗ ಮೂರ್ತಿ ಹಾಗೂ ಸಹಕಾರ ಇಲಾಖೆಯ ಅಧಿಕಾರಿ ವರ್ಗದವರು ಹಾಜರಿದ್ದರು. ಕಾರ್ಯಕ್ರಮದ ಸ್ವಾಗತ ಮತ್ತು ನಿರೂಪಣೆಯನ್ನು ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ನಿರ್ವಹಿಸಿದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*