ಮಡಿಕೇರಿ ಅ.28 : ಅವಧಿ ಪೂರ್ಣಗೊಳ್ಳಲಿರುವ ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆಯನ್ನು ನಡೆಸಲು ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ತಯಾರಿಸಲು ನಿರ್ದೇಶನ ನೀಡಿರುತ್ತದೆ.
ಅರ್ಹತಾ 2023 ರ ನ.1 ಕ್ಕೆ ಕರ್ನಾಟಕ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ದಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿರುತ್ತದೆ. ಭಾರತ ಚುನಾವಣಾ ಆಯೋಗದ 2023 ರ ಆ.9 ರ ಪತ್ರದನ್ವಯ ಕರ್ನಾಟಕ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಮತ ಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ದ ಪಡಿಸಲಾಗುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ-18 ಮತ್ತು ನಮುನೆ-19 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಿದೆ. ನಮೂನೆ-18 ಮತ್ತು ನಮೂನೆ-19 ರ ಅರ್ಜಿಗಳನ್ನು ಸ್ವೀಕರಿಸಲು 2023 ರ ನ.6 ಕೊನೆಯ ದಿನವಾಗಿದೆ.
ಕರ್ನಾಟಕ ನೈರುತ್ಯ ಶಿಕ್ಷಕರ ಮತ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅರ್ಹತೆಗಳು: ಭಾರತದ ಪ್ರಜೆಯಾಗಿರುವ ಮತ್ತು ಈ ಮತಕ್ಷೇತ್ರದ ವ್ಯಾಪಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವ ಮತ್ತು 2023 ರ ನವೆಂಬರ್, 01 ಕ್ಕೆ ಮೊದಲು ಆರು ವರ್ಷದ ಅವಧಿಯಲ್ಲಿ ಕನಿಷ್ಟ ಒಟ್ಟು ಮೂರು ವರ್ಷಗಳಷ್ಟು ದರ್ಜೆಯಲ್ಲಿ ಪ್ರೌಢಶಾಲೆಗಿಂತ ಕಡಿಮೆಯಿಲ್ಲದ ನಿರ್ಧಿಷ್ಟಪಡಿಸಿದಂತಹ ರಾಜ್ಯದೊಳಗಿನ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಭೋದನಾ ವೃತ್ತಿಯಲ್ಲಿ ನಿರತವಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಅರ್ಹನಾಗಿರುತ್ತಾನೆ.
ಯಾವುದೇ ವ್ಯಕ್ತಿಯು ನಮೂನೆ-19 ರಲ್ಲಿ ಅರ್ಜಿ ಸಲ್ಲಿಸಿ, ಶಿಕ್ಷಕರ ಕ್ಷೇತ್ರದಲ್ಲಿ ಮತದಾರನಾಗಿ ನೋಂದಾಯಿಸಿಕೊಳ್ಳಲು ತನ್ನ ಶೈಕ್ಷಣಿಕ ಸಂಸ್ಥೆಯ ಮುಖ್ಯಸ್ಥರಿಂದ ತಾನು ಹಿಂದಿನ ಆರು ವರ್ಷಗಳಲ್ಲಿ ಒಟ್ಟು ಮೂರು ವರ್ಷಗಳು ಶಿಕ್ಷಕರಾಗಿ ಸೇವೆ ಸಲ್ಲಿಸಿರುವ ಕುರಿತು ಅರ್ಜಿಯೊಂದಿಗೆ ಪ್ರಮಾಣ ಪತ್ರವನ್ನು ಲಗತ್ತಿಸಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ದಿನಾಂಕದಂದು ಯಾವುದೇ ವ್ಯಕ್ತಿಯು ಭೋದನಾ ವೃತ್ತಿಯಲ್ಲಿ ನಿರತನಾಗಿರದಿದ್ದಲ್ಲಿ, ಪ್ರಮಾಣಪತ್ರವನ್ನು ಅಂತಹ ವ್ಯಕ್ತಿಯು ಕೊನೆಯದಾಗಿ ಸೇವೆ ಸಲ್ಲಿಸಿದ ಸಂಸ್ಥೆಯ ಮುಖ್ಯಸ್ಥರಿಂದ ಸಹಿ ಮಾಡಿರತಕ್ಕದ್ದು. ಖುದ್ದಾಗಿ ಅಥವಾ ಅಂಚೆ ಮುಖಾಂತರ ಒಟ್ಟಾಗಿ ಸಲ್ಲಿಸಿದ್ದ ಅರ್ಜಿಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗಾಗಿ ಪರಿಗಣಿಸಲಾಗುವುದಿಲ್ಲ. ಆದರೆ, ಸಂಸ್ಥೆಯ ಮುಖ್ಯಸ್ಥರು ಅವರು ಸಿಬ್ಬಂದಿಯ ಎಲ್ಲಾ ಅರ್ಜಿಗಳನ್ನು ಒಟ್ಟಾರೆಯಾಗಿ ಕಳುಹಿಸಬಹುದು. ಒಂದೇ ಕುಟುಂಬದ ಇತರೆ ಸದಸ್ಯರ ನಮೂನೆ-19ರ ಅರ್ಜಿಗಳನ್ನು ಕುಟುಂಬದ ಒಬ್ಬ ಸದಸ್ಯರು ಸಲ್ಲಿಸಬಹುದು ಹಾಗೂ ಪ್ರತಿ ಸದಸ್ಯನಿಗೆ ಸಂಬಂಧಿಸಿದಂತೆ ಮೂಲ ಪ್ರಮಾಣ ಪತ್ರಗಳನ್ನು ಒದಗಿಸತಕ್ಕದ್ದು.
ಅರ್ಜಿಯಲ್ಲಿ ತಪ್ಪು ಅಥವಾ ತಪ್ಪೆಂದು ಅವನು ತಿಳಿದಿರುವ ಅಥವಾ ನಂಬುವಂತಹ ಅಥವಾ ಸತ್ಯವೆಂದು ನಂಬಲಾಗದಿರುವಂತಹ ಹೇಳಿಕೆಗಳನ್ನು ಅಥವಾ ಘೋಷಣೆಗಳನ್ನು ಮಾಡುವ ಯಾವುದೇ ವ್ಯಕ್ತಿಯನ್ನು ಪ್ರಜಾ ಪ್ರಾತಿನಿದ್ಯ ಅಧಿನಿಯಮ 1950ರ 31 ನೇ ಪ್ರಕರಣದ ಮೇರೆಗೆ ಶಿಕ್ಷೆಗೆ ಗುರಿಪಡಿಸಲಾಗುವುದು.
ಮೇಲೆ ತಿಳಿಸಿರುವಂತೆ, ನಮೂನೆ-19ರಲ್ಲಿನ ಅರ್ಜಿಗಳನ್ನು ಸಹಾಯಕ ಮತದಾರರ ನೋಂದಣಾಧಿಕಾರಿ / ನಿಯೋಜಿತ ಅಧಿಕಾರಿಗಳ ಕಚೇರಿಯಿಂದ ಪಡೆಯಬಹುದು. ಕೈಬರಹದ, ಬೆರಳಚ್ಚು ಮಾಡಿದ ಅಥವಾ ಖಾಸಗಿಯಾಗಿ ಮುದ್ರಿಸಿದ ನಮೂನೆಗಳನ್ನು ಕೂಡ ಅಂಗೀಕರಿಸಲಾಗುವುದು. ನಮೂನೆ-19ರ ಅರ್ಜಿಗಳನ್ನು ಬಲ್ಕ (ಒಟ್ಟಿಗೆ) ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಕರ್ನಾಟಕ ನೈರುತ್ಯ ಪದವೀಧರರ ಮತ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಮಾರ್ಗಸೂಚಿ: ಅರ್ಹತಾ ದಿನಾಂಕ 01-11-2023 ಕ್ಕಿಂತ 3 ವರ್ಷಗಳ ಪೂರ್ವದಲ್ಲಿ ಅಂದರೆ ದಿನಾಂಕ: 01-11-2020 ಕ್ಕಿಂತಲೂ ಹಿಂದೆ ಮಾನ್ಯತೆ ಪಡೆದು ವಿಶ್ವವಿದ್ಯಾಲಯದಿಂದ ಪದವೀಧರರಾಗಿರಬೇಕು.
ದಿನಾಂಕ 01-11-2020 ಕ್ಕಿಂತಲೂ ಮೊದಲು ಪದವಿ ಪಡೆದಿರುವಂತಹ ಪದವೀಧರರು ನಿಗಧಿಪಡಿಸಿದ ನಮೂನೆ-18 ರಲ್ಲಿ (ಭಾವಚಿತ್ರದೊಂದಿಗೆ) ಭರ್ತಿ ಮಾಡಿದ ಅರ್ಜಿಯೊಂದಿಗೆ ಕಡ್ಡಾಯವಾಗಿ ತಾವು ಉತ್ತೀರ್ಣರಾಗಿರುವ ಬಗ್ಗೆ ಪದವಿ ಪ್ರಮಾಣ ಮತ್ತು ಅಥವಾ ಅಂಕಪಟ್ಟಿ, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಹಾಗೂ ತಾವು ವಾಸಿಸುತ್ತಿರುವ ವಾಸಸ್ಥಳದ ದಾಖಲೆಗಳನ್ನು ಸ್ವಯಂ ಧೃಡೀಕರಿಸಿ, ಅಲ್ಲದೇ ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಿ ಅರ್ಜಿಯೊಂದಿಗೆ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ ಸಲ್ಲಿಸಬಹುದು. ಬಲ್ಕ (ಗುಚ್ಚಗಳಲ್ಲಿ) ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.
ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿಗಳ, ಉಪ ವಿಭಾಗಾಧಿಕಾರಿಗಳ ಮತ್ತು ತಹಶೀಲ್ದಾರರ ಕಚೇರಿಯನ್ನು ಸಂಪರ್ಕಿಸಬಹುದು ಹಾಗೂ www.ceokarnataka.kar.nic.in ವೆಬ್‍ಸೈಟ್‍ನಲ್ಲಿಯೂ ಸಹ ಹೆಚ್ಚಿನ ಮಾಹಿತಿ ಲಭ್ಯವಿದ್ದು, ಮಾಹಿತಿಯನ್ನು ಪಡೆಯಬಹುದು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*