ಮಡಿಕೇರಿ ಅ.28 : ಕರಡು ಮತದಾರರ ಪಟ್ಟಿ ಪ್ರಕಟ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಮುಖಂಡರ ಜೊತೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಕರಡು ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳ ಪ್ರಮುಖರಿಗೆ ನೀಡಿದರು.
ಕರಡು ಮತದಾರರ ಪಟ್ಟಿಯಲ್ಲಿ ಆಕ್ಷೇಪಣೆಗಳು ಇದ್ದಲ್ಲಿ ಮಾಹಿತಿ ನೀಡಬಹುದಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ, ಸ್ಥಳಾಂತರ ಮತ್ತಿತರ ಸಂಬಂಧಿಸಿದಂತೆ ಮೊಬೈಲ್ ಅಪ್ಲಿಕೇಷನ್‍ನಲ್ಲಿ ಮತದಾರರ ಸಹಾಯವಾಣಿ (ವೋಟರ್ ಹೆಲ್ಫ್ ಲೈನ್)ನಲ್ಲಿ ನೇರವಾಗಿ ಸಲ್ಲಿಸಬಹುದಾಗಿದೆ. ಇಲ್ಲದಿದ್ದಲ್ಲಿ ತಹಶೀಲ್ದಾರರ ಕಚೇರಿಯ ಚುನಾವಣಾ ಶಾಖೆಗೆ ಭೇಟಿ ನೀಡಿ ಸರಿಪಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು.
ನಮೂನೆ-6, 6ಎ, 7 ಮತ್ತು 8ರ ಅರ್ಜಿಗಳನ್ನು ಭಾರತ ಚುನಾವಣಾ ಆಯೋಗವು ಅಭಿವೃದ್ಧಿ ಪಡಿಸಿರುವ ಮೋಬೈಲ್ ಅಪ್ಲಿಕೇಷನ್ ಮತದಾರರ ಸಹಾಯವಾಣಿ ಆಪ್ (VOTER HELPLINE APP) ಹಾಗೂ https://voters.eci.gov.in/ / VOTERS’ SERVICE PORTAL ಮೂಲಕ ಆನ್‍ಲೈನ್‍ನಲ್ಲಿ ನೇರವಾಗಿ ಸಲ್ಲಿಸಬಹುದು.
ಮತದಾರರ ಪಟ್ಟಿಯಲ್ಲಿ ಆಧಾರ್ ಲಿಂಕ್ ಮಾಡಲಾಗಿದ್ದು, ಯಾವುದಾದರೂ ಒಂದು ಮತಗಟ್ಟೆಯಲ್ಲಿ ಮಾತ್ರ ಹೆಸರು ಇರಬಹುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಹಾಗೆಯೇ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆ ಬರಲಿದ್ದು, ಅರ್ಹರೆಲ್ಲರೂ ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಅಗತ್ಯ ಸಹಕಾರ ನೀಡುವಂತೆ ರಾಜಕೀಯ ಪಕ್ಷಗಳ ಪ್ರಮುಖರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ವಕ್ತಾರರಾದ ತೆನ್ನಿರಾ ಮೈನಾ ಅವರು ಕೊಡಗು ಜಿಲ್ಲೆಯ ಹಾಡಿಯ ಜನರು ಇನ್ನೂ ಸಹ ಆಧಾರ್ ಕಾರ್ಡ್ ಪಡೆದುಕೊಂಡಿಲ್ಲ. ಆದ್ದರಿಂದ ಆಧಾರ್ ಕಾರ್ಡ್ ಕೊಡಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರಲ್ಲಿ ಮನವಿ ಮಾಡಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅವರು ಆಧಾರ್ ಪಡೆಯದಿರುವ ಆದಿವಾಸಿ ಕುಟುಂಬಗಳಿಗೆ ಆಧಾರ್ ಕಾರ್ಡ್ ಪಡೆಯುವಂತಾಗಲು ‘ಆಧಾರ್ ನೋಂದಣಿ ವಿಶೇಷ ಅಭಿಯಾನ’ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಕರಡು ಮತದಾರರ ಪಟ್ಟಿ ಸಂಬಂಧಿಸಿದಂತೆ ತಿದ್ದುಪಡಿ ಮತ್ತಿತರ ಸಂಬಂಧ ಈಗಲೇ ಸರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ವೋಟರ್ ಹೆಲ್ಫ್‍ಲೈನ್‍ನಲ್ಲಿ ಗಮನಿಸಬಹುದು ಎಂದರು.
ಭಾರತೀಯ ಜನತಾ ಪಕ್ಷದ ಮುಖಂಡರಾದ ಅಪ್ಪಣ್ಣ ಅವರು ಕರಡು ಮತದಾರರ ಪಟ್ಟಿ ಹಾಗೂ ಶಿಕ್ಷಕರ ಮತ್ತು ಪದವೀಧರರ ಚುನಾವಣೆ ಸಂಬಂಧ ಅಗತ್ಯ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಇದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*