ನಾಪೋಕ್ಲು ಅ.28 : ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ನಾಪೋಕ್ಲುವಿನ 9ನೇ ತರಗತಿ ವಿದ್ಯಾರ್ಥಿನಿ ಅರೆಪ್ರಜ್ಞಾವಸ್ಥೆಯಲ್ಲಿ ಮನೆ ಸಮೀಪದ ಕಾಫಿ ತೋಟವೊಂದರಲ್ಲಿ ಪತ್ತೆಯಾಗಿದ್ದಾಳೆ.
ಮರಂದೋಡು ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಅರೆಪ್ರಜ್ಞಾವಸ್ಥೆಯಲ್ಲಿದ್ದ ವಿದ್ಯಾರ್ಥಿನಿಯನ್ನು ನೋಡಿದ್ದಾರೆ. ಆಕೆಯನ್ನು ಮನೆಗೆ ಕರೆತಂದು ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರದಿ : ದುಗ್ಗಳ ಸದಾನಂದ








