ಮಡಿಕೇರಿ ಅ.28 : ವಿಶ್ವದ ಗುರುವಾದ ಮಹರ್ಷಿ ವಾಲ್ಮೀಕಿ ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಕರೆ ನೀಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಹರ್ಷಿ ವಾಲ್ಮೀಕಿ ಅವರು ಸಾವಿರಾರು ವರ್ಷಗಳ ಹಿಂದೆಯೇ ರಾಮಾಯಣ ಬರೆಯುವ ಮೂಲಕ ಬುದ್ದಿವಂತಿಕೆ ಪ್ರದರ್ಶನ ಮಾಡಿದ್ದಾರೆ. ಮಹರ್ಷಿ ವಾಲ್ಮೀಕಿ ಅವರು ತೋರಿರುವ ದಾರಿಯಲ್ಲಿ ನಡೆಯಬೇಕು. ಇಡೀ ದಕ್ಷಿಣ ಏಷ್ಯಾದಲ್ಲಿಯೇ ವಾಲ್ಮೀಕಿ ರಾಮಾಯಣ ಕಥೆಗಳನ್ನು ಅಧ್ಯಯನ ಮಾಡಬಹುದಾಗಿದೆ ಎಂದು ಕೆ.ರಾಮರಾಜನ್ ನುಡಿದರು.
‘ಬುದ್ದಿವಂತಿಕೆ ಯಾರ ಸೊತ್ತಲ್ಲ. ಅವಕಾಶಗಳು ಒಂದೊಂದು ರೀತಿ ಸಿಕ್ಕಿರುತ್ತವೆ. ಅದರಂತೆ ಅವರು ಮೇಲೆ ಬಂದಿರುತ್ತಾರೆ. ಅವಕಾಶ ವಂಚಿತರಿಗೆ ಅವಕಾಶಗಳೇ ಲಭ್ಯವಾಗುವುದಿಲ್ಲ. ಸಮಾಜದಲ್ಲಿ ಎಲ್ಲರಿಗೂ ಅವಕಾಶಗಳು ಸಿಗುವಂತಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಪ್ರತಿಪಾದಿಸಿದರು.’
ಜಿ.ಪಂ.ಸಿಇಒ ವರ್ಣಿತ್ ನೇಗಿ ಮಾತನಾಡಿ ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆಯನ್ನು ರಾಮಾಯಣದ ಮೂಲಕ ಎಲ್ಲೆಡೆ ಕಾಣಬಹುದಾಗಿದೆ. ಅವರ ಆದರ್ಶ ಗುಣಗಳು ಇಂದಿಗೂ ಸಹ ಮಾದರಿಯಾಗಿದೆ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಮಾತನಾಡಿ ವಾಲ್ಮೀಕಿ ಅವರ ಮೂಲ ರಾಮಾಯಣ ಮಹತ್ವದ್ದಾಗಿದೆ. ಭಾರತೀಯರೆಲ್ಲರೂ ಸಹ ರಾಮಾಯಣ ಮತ್ತು ಮಹಾಭಾರತವನ್ನು ಅಧ್ಯಯನ ಮಾಡುವಂತಾಗಬೇಕು. ಶ್ರೀರಾಮನನ್ನು ವ್ಯಕ್ತಿಯಾಗಿ ನೋಡುವುದಲ್ಲ. ವ್ಯಕ್ತಿತ್ವವಾಗಿ ನೋಡುತ್ತೇವೆ. ಸಮಾಜದಲ್ಲಿ ಇತರರೊಂದಿಗೆ ಹೇಗೆ ನಡೆದುಕೊಳ್ಳಬೇಕು ಎಂಬ ಬಗ್ಗೆ ವಾಲ್ಮೀಕಿ ರಾಮಾಯಣದಲ್ಲಿ ಕಾಣಬಹುದಾಗಿದೆ. ವಾಲ್ಮೀಕಿ ರಾಮಾಯಣ ಓದುವುದರಿಂದ ಹೆಚ್ಚಿನ ಜ್ಞಾನ ದೊರೆಯುತ್ತದೆ ಎಂದು ತಿಳಿಸಿದರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಶ್ರೀಧರ ಆರ್.ಹೆಗಡೆ ಅವರು ಮಾತನಾಡಿ ರಾಮಾಯಣ ಮಹಾಗ್ರಂಥದಲ್ಲಿ ಭಾರತೀಯ ಸಂಸ್ಕೃತಿ ಯನ್ನು ಪ್ರತಿಬಿಂಬಿಸುತ್ತದೆ ಎಂದರು.
ಸಾಮಾನ್ಯ ಕುಟುಂಬದಿಂದ ಬಂದ ಮಹರ್ಷಿ ವಾಲ್ಮೀಕಿ ಅವರು 24 ಸಾವಿರ ಶ್ಲೋಕಗಳನ್ನು ರಾಮಾಯಣದಲ್ಲಿ ಕಾಣಬಹುದಾಗಿದೆ. ಶಾಲೆಗಳಲ್ಲಿ ರಾಮಾಯಣ ಕಥೆಗಳನ್ನು ಹೇಳುವಂತಾಗಬೇಕು. ವಾಲ್ಮೀಕಿ ರಾಮಾಯಣ ಎಲ್ಲೆಡೆ ಪಸರಿಸುವಂತಾಗಬೇಕು ಎಂದು ಶ್ರೀಧರ ಹೆಗಡೆ ನುಡಿದರು.
ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷ ಅಶೋಕ್ ಮಾತನಾಡಿ ಕೊಡಗು ಜಿಲ್ಲೆಯ ಎಲ್ಲಿಯಾದರೂ ಮಹರ್ಷಿ ವಾಲ್ಮೀಕಿಯವರ ಪ್ರತಿಮೆಯನ್ನು ನಿರ್ಮಿಸಬೇಕು ಎಂದು ಕೋರಿದರು.
ಆದಿವಾಸಿ ಜನರ ಏಳಿಗೆಗಾಗಿ ಶ್ರಮಿಸಿದ ಜೆ.ಪಿ.ರಾಜು ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ನೀಟ್ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ವೈದ್ಯಕೀಯ ಪದವಿ ಪ್ರವೇಶ ಪಡೆದಿರುವ ರೋಹನ್ ಸುರೇಶ್ ಅವರನ್ನು ಗೌರವಿಸಲಾಯಿತು. ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಅಂತರ್ ಜಾತಿ ವಿವಾಹಿತರಿಗೆ 3 ಲಕ್ಷ ರೂ. ಪ್ರೋತ್ಸಾಹ ಧನದ ಚೆಕ್ ವಿತರಿಸಲಾಯಿತು. ಹಾಗೆಯೇ ಕಾನೂನು ಪದವಿ ಪಡೆದು ಎರಡು ವರ್ಷಗಳ ಕಾಲ ತರಬೇತಿ ಪಡೆಯಲು ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ಆದೇಶ ಪತ್ರ ನೀಡಲಾಯಿತು. ಚೆನ್ನಂಗಿ ಬಸವನಹಳ್ಳಿ ಸರ್ಕಾರಿ ವಸತಿ ಶಾಲೆಯ ಮತ್ತು ಮರೂರು ತಿತಿಮತಿ ವಸತಿ ಶಾಲೆಯ ವಿದ್ಯಾರ್ಥಿಗಳು ಇದೇ ಸಂದರ್ಭದಲ್ಲಿ ನೃತ್ಯ ಪ್ರದರ್ಶನ ಮಾಡಿದರು.
ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ತಹಶೀಲ್ದಾರ್ ಪ್ರವೀಣ್ ಕುಮಾರ್, ಆದಿವಾಸಿ ಪ್ರಮುಖರಾದ ಕುಡಿಯರ ಮುತ್ತಪ್ಪ, ಮಿಟ್ಟು ರಂಜತ್, ಮುತ್ತಮ್ಮ, ಆರ್.ಕೆ.ಚಂದ್ರು, ಜೆ.ಪಿ.ರಾಜು, ಇತರರು ಇದ್ದರು.
ಪವನ್ ಕುಮಾರ್ ನಿರೂಪಿಸಿದರು. ಎಸ್.ಹೊನ್ನೇಗೌಡ ಸ್ವಾಗತಿಸಿದರು. ಬಾಳುಗೋಡು ಏಕಲವ್ಯ ವಸತಿ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಬಾಳುಗೋಡು ವಸತಿ ಶಾಲೆಯ ಪ್ರಾಂಶುಪಾಲರಾದ ದಿಲನ್ ಮುತ್ತಣ್ಣ ವಂದಿಸಿದರು.
ಮೆರವಣಿಗೆ: ಸಭಾ ಕಾರ್ಯಕ್ರಮಕ್ಕೂ ಮೊದಲು ನಗರದ ಗಾಂಧಿ ಮಂಟಪದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಮೆರವಣಿಗೆಗೆ ಚಾಲನೆ ನೀಡಿದರು. ಜಿಲ್ಲೆಯ ವಿವಿಧ ಗಿರಿಜನ ಆಶ್ರಮ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು, ಪ್ರಾಂಶುಪಾಲರು ಪಾಲ್ಗೊಂಡಿದ್ದರು. ಹುಣಸೂರಿನ ಡೊಳ್ಳು ಕುಣಿತ ಕಲಾ ತಂಡದ ಪ್ರದರ್ಶನ ಗಮನ ಸೆಳೆಯಿತು. ಗಾಂಧಿ ಮಂಟಪದಿಂದ ಜನರಲ್ ತಿಮ್ಮಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತದ ಮೂಲಕ ಕಾವೇರಿ ಕಲಾಕ್ಷೇತ್ರದ ವರೆಗೆ ಮೆರವಣಿಗೆ ನಡೆಯಿತು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*