ಮಡಿಕೇರಿ ಅ.28 : ಕೊಡವ ಮಕ್ಕಡ ಕೂಟದ ವತಿಯಿಂದ ನ.2 ರಂದು ಲೇಖಕಿ ತೆನ್ನೀರ ಟೀನಾ ಚಂಗಪ್ಪ ಬರೆದಿರುವ “ಮರ್‍ಂಜ ಪಾಳೆ” ಕೊಡವ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.
ಅಂದು ಮಧ್ಯಾಹ್ನ 2 ಗಂಟೆಗೆ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಬ್ರಹ್ಮಗಿರಿ ವಾರಪತ್ರಿಕೆಯ ಸಂಪಾದಕ ಡಾ.ಉಳ್ಳಿಯಡ ಎಂ.ಪೂವಯ್ಯ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ, ಸಾಹಿತಿ ಉಳ್ಳಿಯಡ ಡಾಟಿ ಪೂವಯ್ಯ, ಮರ್‍ಂಜ ಪಾಳೆ ಪುಸ್ತಕದ ಬರಹಗಾರ್ತಿ ತೆನ್ನೀರ ಟೀನಾ ಚಂಗಪ್ಪ, ಸಮಾಜ ಸೇವಕರಾದ ಚಿಲ್ಲವಂಡ ಕಾವೇರಪ್ಪ, ಕುಳುವಂಡ ಮಣಿ ಜೋಯಪ್ಪ, ಮುಕೋಡ್ಲು ವ್ಯಾಲಿ ಡ್ಯೂನ ಅಧ್ಯಕ್ಷ ಹಂಚೆಟ್ಟಿರ ಮನು ಮುದ್ದಪ್ಪ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮಕ್ಕೆ ಸಾಹಿತ್ಯಾಸಕ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮನವಿ ಮಾಡಿದ್ದಾರೆ.









