ನಾಪೋಕ್ಲು ಅ.28 : ನಾಪೋಕ್ಲು ವ್ಯಾಪ್ತಿಯಲ್ಲಿ ನೈತಿಕ ಪೊಲೀಸ್ ಗಿರಿಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಕೋಮು ಸೌಹಾರ್ದತೆಗೆ ದಕ್ಕೆ ತರುವ ಯತ್ನ ಮಾಡುತ್ತಿದ್ದಾರೆ. ಸಮಾಜದಲ್ಲಿ ಅಶಾಂತಿ ಮೂಡಿಸಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.
ವ್ಯಾಟ್ಸಪ್, ಇನ್‌ಸ್ಟಾಗ್ರಾಮ್, ಫೇಸ್ ಬುಕ್ ಮತ್ತು ಟ್ವಿಟರ್ ಮೂಲಕ ನೈತಿಕ ಪೊಲೀಸ್ ಗಿರಿಯ ಹೆಸರಿನಲ್ಲಿ ಸುಳ್ಳು ಸುದ್ದಿಗಳನ್ನು ಹರಡಿ ಶಾಂತಿ ಕದಡುವ ಯತ್ನ ನಡೆಯುತ್ತಿದೆ. ಇದನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ. (ವರದಿ : ದುಗ್ಗಳ ಸದಾನಂದ)










