Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೇಂದ್ರ ಸರ್ಕಾರದಿಂದ ರೈತರಿಗೆ ಅನ್ಯಾಯ : ಕೊಡಗು ಆಮ್ ಆದ್ಮಿ ಪಾರ್ಟಿ ಆರೋಪ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೇಂದ್ರ ಸರ್ಕಾರದಿಂದ ರೈತರಿಗೆ ಅನ್ಯಾಯ : ಕೊಡಗು ಆಮ್ ಆದ್ಮಿ ಪಾರ್ಟಿ ಆರೋಪ

ಅಕ್ಟೋಬರ್ 29, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಅ.29 : ಕೇಂದ್ರ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲದಂತೆ ಆಗಿದೆ. ಗ್ರೀನ್ ಎನರ್ಜಿ ಬಗ್ಗೆ ಹೇಳುವ ಕೇಂದ್ರ ಸರ್ಕಾರ ರೈತರ ಪಂಪ್ ಸೆಟ್ ಗೆ ಸಬ್ಸಿಡಿ ನೀಡದೆ ಅನ್ಯಾಯ ಮಾಡಿದೆ ಎಂದು ಆಮ್ ಆದ್ಮಿ ಪಕ್ಷದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಭೋಜಣ್ಣ ಸೋಮಯ್ಯ ಆರೋಪಿಸಿದ್ದಾರೆ.
ಅವರು ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೈತರ ಸೋಲಾರ್ ಪಂಪ್ ಸೆಟ್ ಗೆ ಶೇ.50 ಸಬ್ಸಿಡಿ ನೀಡಲು ಎಎಪಿ ಪಕ್ಷ ಒತ್ತಾಯಿಸಿದೆ. ಈ ವರ್ಷ ಮಳೆ ಕಡಿಮೆ ಇರುವುದರಿಂದ ಕಾಫಿ ಬೆಳೆಗಾರರು ಬಹಳ ಸಂಕಟದಲ್ಲಿ ಇದ್ದಾರೆ. ತಮ್ಮ ಫಸಲು ಉಳಿಸಿಕೊಳ್ಳಲು ನೀರು ಪಂಪ್ ಮಾಡುವ ಕಾಯಕದಲ್ಲಿ ತೊಡಗಿದ್ದಾರೆ.
ಕೇಂದ್ರ ಸರ್ಕಾರದಿಂದ ಯಾವುದೇ ಸಹಾಯಧನ ನೀಡಿಲ್ಲ. ಕಳೆದ ವರ್ಷ ಅತಿವೃಷ್ಟಿಯಿಂದ ಬೆಳೆ ನಾಶವಾಗಿದ್ದು ಯಾವುದೇ ಪ್ರೋತ್ಸಾಹ ಧನ ನೀಡಿಲ್ಲ ಎಂದು ಹೇಳಿದರು.
ರಾಜ್ಯದ ರೈತರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಲು ರಾಜ್ಯ ಸರ್ಕಾರ ಪ್ರತಿವರ್ಷ 6,900 ಕೋಟಿ ರೂ. ಖರ್ಚು ಮಾಡುತ್ತಿದೆ. ರಾಜ್ಯದಲ್ಲಿ ಒಟ್ಟು 34 ಲಕ್ಷ ಪಂಪ್‌ಸೆಟ್‌ಗಳಿದ್ದು, ಇವುಗಳ ಅಳವಡಿಕೆಗೆ ಒಟ್ಟು 13,800 ಕೋಟಿ ರೂ. ಖರ್ಚಾಗುತ್ತದೆ ಎಂಬ ಅಂದಾಜಿದೆ. ಇನ್ನುಳಿದ 6900 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರವು ಭರಿಸುವ ಮೂಲಕ ಉಚಿತವಾಗಿ ಸರ್ಕಾರವೇ ಪ್ರತಿಯೊಬ್ಬ ರೈತರಿಗೂ ಸೋಲಾರ್ ಪಂಪ್ ವಿತರಿಸಿದರೆ ರೈತರಿಗೂ ಅನುಕೂಲವಾಗಲಿದೆ. ರಾಜ್ಯ ಸರ್ಕಾರಕ್ಕೂ ಪ್ರತಿ ವರ್ಷದ ಸಬ್ಸಿಡಿ ಖರ್ಚು ಉಳಿಯಲಿದೆ ಎಂದು ಭೋಜಣ್ಣ ಸೋಮಯ್ಯ ಹೇಳಿದರು.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಸಮ ಪ್ರಮಾಣದಲ್ಲಿ ಜಿಎಸ್‌ಟಿ ಪಡೆಯುತ್ತಿದೆ. ಆದರೆ, ರಾಜ್ಯದ ಅಭಿವೃದ್ಧಿಗೆ ಕೂಡ ಸಮನಾಗಿ ಬಂಡವಾಳ ಹಾಕಬೇಕು. ಸೋಲಾರ್ ಪಂಪ್‌ಸೆಟ್‌ಗೆ ಶೇ 30ರಷ್ಟು ಸಹಾಯಧನ ನಾವು ಕೊಡುತ್ತೇವೆ. ಶೇ 50ರಷ್ಟು ಸಹಾಯ ಧನವನ್ನು ರಾಜ್ಯ ಸರ್ಕಾರ ಕೊಡಲಿ ಎನ್ನುವುದು ನ್ಯಾಯವಲ್ಲ. ಟ್ಯಾಕ್ಸ್ ಮಾತ್ರ ಸಮನಾಗಿ ತೆಗೆದುಕೊಳ್ಳುವವರು, ರಾಜ್ಯಕ್ಕೆ ಕೊಡುವಾಗಲೂ ಸಮವಾಗಿ ಕೊಟ್ಟರೆ ಒಕ್ಕೂಟ ವ್ಯವಸ್ಥೆ ಉಳಿಯುತ್ತದೆ ಎಂದು ಕೇಂದ್ರ ಸರ್ಕಾರದ ನೀತಿಯನ್ನು ಟೀಕಿಸಿದರು.
ದೇಶದಲ್ಲಿ 70 ರಷ್ಟು ರೈತರಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರ ಉಚಿತವಾಗಿ ಸೋಲಾರ್ ಪಂಪ್ ಸೆಟ್ ವಿತರಣೆ ಮಾಡಿದರೆ, ದೀರ್ಘಾವಧಿಯಲ್ಲಿ ಸರ್ಕಾರಗಳಿಗೂ ಲಾಭವಾಗಲಿದೆ. ಸರ್ಕಾರವು ಸೋಲಾರ್ ಪ್ಲಾಂಟ್ ಗಳನ್ನು ಅಳವಡಿಸಲು ನೀಡುತ್ತಿರುವ ನೂರಾರು ಕೋಟಿ ಹಣ ಉಳಿಯುತ್ತದೆ. ಇದಲ್ಲದೆ ಹೆಚ್ಚಿನ ವಿದ್ಯುತ್ತನ್ನು ಉತ್ಪಾದಿಸಿ ಪವರ್ ಗ್ರೀಡಿಗೆ ನೀಡಿದಲ್ಲಿ ರೈತರಿಗೆ ಸಹ ಸಾಕಷ್ಟು ಆರ್ಥಿಕ ಸಹಾಯವು ಆಗುತ್ತದೆ. ಇದುವರೆಗೂ ನಿರಂತರ ವಿದ್ಯುತ್ ಇಲ್ಲದೆ ಬೆಳೆ ನಾಶ ಆಗುತ್ತಿದ್ದು, ಸೋಲಾರ್ ಪಂಪ್‌ನಿಂದ ರೈತರಿಗೆ ಬೆಳೆ ಉತ್ಪಾದನೆ ಹೆಚ್ಚಾಗಲಿದೆ. ಇದು ಜಿಡಿಪಿ ಬೆಳವಣಿಗೆಗೆ ಕೂಡ ಸಹಕಾರಿಯಾಗಲಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರ 2017ರಲ್ಲಿ ಕುಸುಮ್ ಯೋಜನೆ ಜಾರಿ ಮಾಡಿದ್ದು, ಕರ್ನಾಟಕ ರಾಜ್ಯಕ್ಕೆ 10,314 ಪಂಪ್‌ಸೆಟ್ ನೀಡಿದೆ. ಶೇ 30ರಷ್ಟು ಸಬ್ಸಿಡಿ ನೀಡುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಇದರಲ್ಲಿ ಕೇವಲ 314 ಪಂಪ್‌ಸೆಟ್ ಮಾತ್ರ ರಾಜ್ಯದಲ್ಲಿ ವಿತರಣೆಯಾಗಿದೆ. ಜನರ ಕಣ್ಣೊರೆಸಲು ಮಾತ್ರ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಪ್ರಧಾನಿ ಮೋದಿ ಅವರು ಮಾಲಿನ್ಯ ಕಡಿಮೆ ಮಾಡಬೇಕು, ನೈಸರ್ಗಿಕ ಇಂಧನ ಉತ್ಪಾದಿಸಬೇಕು ಎನ್ನುವ ಯೋಜನೆ ಕೇವಲ ಭಾಷಣಕ್ಕೆ ಸೀಮಿತವಾಗಿದೆ.. ಆದರೆ, ದೇಶದಲ್ಲಿ ಪರಿಸರ ಸ್ನೇಹಿ ಯೋಜನೆಗಳು ನಡೆಯುತ್ತಿಲ್ಲ ಎಂದು ಹೇಳಿದರು.

ಅದಾನಿ ಗ್ರೂಪ್ ಆಸ್ಟ್ರೇಲಿಯಾದಿಂದ ಕಲ್ಲಿದ್ದಲನ್ನು ಆಮದು ಮಾಡಿಕೊಂಡು ದೇಶದ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಪೂರೈಕೆ ಮಾಡುತ್ತಿದ್ದು, ಇದರಲ್ಲಿ 50 ಪ್ರತಿಶತ ಆದಾಯ ಗಳಿಸಿದೆ ಎಂದು ವರದಿಯಾಗಿದೆ. ಇಂತಹವರಿಗೆ ಅನುಕೂಲ ಮಾಡಿಕೊಡಲು ಗ್ರೀನ್ ಎನರ್ಜಿ ಬಗ್ಗೆ ಕೇಂದ್ರ ಸರ್ಕಾರ ತಲೆ ಕೆಡಿಸಿಕೊಂಡಿಲ್ಲ ಎಂದು ಆರೋಪ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ.ಕೆ.ಅಪಯ್ಯ ಹಾಗೂ ಕಾರ್ಯದರ್ಶಿ ಪೃಥ್ವಿ ಮಡಿಕೇರಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.17: ಸಮೀಪದ ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ…

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.