ಮಡಿಕೇರಿ ಅ.29 : ವಿಜಯ ದಶಮಿ ಅಂಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಇಂದು ನಗರದಲ್ಲಿ ಪಥಸಂಚಲನ ನಡೆಸಿದರು.
ನಗರದ ಜೂನಿಯರ್ ಕಾಲೇಜು ಮೈದಾನದಿಂದ ಆರಂಭಗೊಂಡ ಪಥಸಂಚಲನ ಮಹದೇವಪೇಟೆ, ಬನ್ನಿ ಮಂಟಪ, ಹಳೇ ಖಾಸಗಿ ಬಸ್ ನಿಲ್ದಾಣ, ಜನರಲ್ ತಿಮ್ಮಯ್ಯ ವೃತ್ತದ ಮೂಲಕ ಸಾಗಿ ಶ್ರೀ ಆಂಜನೇಯ ದೇವಾಲಯದ ಮುಂಭಾಗದಲ್ಲಿ ಸಮಾರೋಪಗೊಂಡಿತು.
ಜಿಲ್ಲೆಯ ವಿವಿಧ ಭಾಗಗಳಿಂದ ಮಕ್ಕಳಾದಿಯಾಗಿ ನೂರಾರು ಸಂಖ್ಯೆಯಲ್ಲಿ ಗಣವೇಷಧಾರಿಗಳು ಆಗಮಿಸಿ ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು. ಮುಖ್ಯ ರಸ್ತೆಗಳ ಇಕ್ಕೆಲಗಳಲ್ಲಿ ನಿಂತಿದ್ದ ಮಹಿಳೆಯರು ಹಾಗೂ ಸಾರ್ವಜನಿಕರು ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದ ಗಣ ವೇಷಧಾರಿಗಳ ಮೇಲೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸೂಚಿಸಿದರು.











